
ಬೆಂಗಳೂರು (ಡಿ.22): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ(Crude oil) ಬೆಲೆಯಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ. ಜಗತ್ತಿನಾದ್ಯಂತ ಹೆಚ್ಚುತ್ತಿರೋ ಒಮಿಕ್ರಾನ್ (Omicron) ಸೋಂಕು ಪ್ರಕರಣಗಳು, ಅಮೆರಿಕದಲ್ಲಿ ಹೆಚ್ಚುತ್ತಿರೋ ಹಣದುಬ್ಬರ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಅನಿಶ್ಚಿತತೆ ತೈಲ ಬೆಲೆ ಮೇಲೆ ಪರಿಣಾಮ ಬೀರುತ್ತಿದೆ. ಆದ್ರೆ ಭಾರತದಲ್ಲಿ ಮಾತ್ರ ನವೆಂಬರ್ 4ರ ಬಳಿಕ ಪೆಟ್ರೋಲ್ (Petrol)ಹಾಗೂ ಡೀಸೆಲ್ (Diesel)ಬೆಲೆಯಲ್ಲಿ (Price) ಯಾವುದೇ ಬದಲಾವಣೆ ಕಂಡುಬಂದಿಲ್ಲ. ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (excise duty) ಕಡಿತಗೊಳಿಸಿದ ಪರಿಣಾಮ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಕೆಲವು ರಾಜ್ಯ ಸರ್ಕಾರಗಳು ಕೂಡ ಇಂಧನ ಮೇಲಿನ ತೆರಿಗೆಗಳನ್ನು ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಮಾಡಿವೆ. ಆದ್ರೆ ಆ ಬಳಿಕ ದೆಹಲಿ ಹೊರತುಪಡಿಸಿದ್ರೆ ದೇಶದ ಬೇರೆ ಯಾವ ನಗರಗಳಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಕಂಡುಬಂದಿಲ್ಲ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.22) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಎಷ್ಟಿದೆ?
ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ ಇಂದು 100.31ರೂ. ಇದೆ. ನಿನ್ನೆ 100.30ರೂ. ಇತ್ತು. ಅಂದ್ರೆ ನಿನ್ನೆಗಿಂತ ಇಂದು 0.01ರೂ. ಏರಿಕೆಯಾಗಿದೆ. ಡೀಸೆಲ್ ಬೆಲೆ ಇಂದು 84.79 ರೂ.ಇದೆ. ನಿನ್ನೆ 84.78 ರೂ. ಇತ್ತು. ಮಂಗಳೂರಿನಲ್ಲಿ (Mangalore)ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore) ಪೆಟ್ರೋಲ್ ದರ ಲೀಟರ್ ಗೆ 100.32ರೂ. ಇದೆ. ನಿನ್ನೆ 100.08ರೂ.ಇತ್ತು. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.77ರೂ.ಇದೆ. ನಿನ್ನೆ 84.56ರೂ. ಇತ್ತು. ನಿನ್ನೆ ಕಲಬುರಗಿಯಲ್ಲಿ(Kalburgi) ಪೆಟ್ರೋಲ್ ಬೆಲೆ ಲೀಟರ್ ಗೆ 100.52ರೂ. ಇತ್ತು. ಇಂದು 0.37ರೂ. ಏರಿಕೆಯಾಗಿ 100.89ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 84.99ರೂ. ಇತ್ತು. ಇಂದು 85.31ರೂ. ಇದೆ. ಅಂದ್ರೆ 0.32ರೂ. ಏರಿಕೆಯಾಗಿದೆ.
NPS Scheme : ನಿಮ್ಮ ಪತ್ನಿ ಲಕ್ಷಾಧಿಪತಿಯಾಗ್ಬೇಕೆಂದ್ರೆ ಈ ಖಾತೆಯಲ್ಲಿ ಹಣ ಹೂಡಿ
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
Payment Card Tokenization:ಜನವರಿ 1ರಿಂದ ಆನ್ಲೈನ್ ತಾಣಗಳಲ್ಲಿ ಕ್ರೆಡಿಟ್, ಡೆಬಿಟ್ ಕಾರ್ಡ್ ಬಳಕೆಗೆ ಹೊಸ ನಿಯಮ
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
"
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.