Petrol Diesel Rate: ವಾಹನ ಸವಾರರಿಗೆ ನಿರಾಳ; ಇಂದು ಕೂಡ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

Suvarna News   | Asianet News
Published : Dec 24, 2021, 11:16 AM ISTUpdated : Dec 24, 2021, 11:24 AM IST
Petrol Diesel Rate: ವಾಹನ ಸವಾರರಿಗೆ ನಿರಾಳ;  ಇಂದು ಕೂಡ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಸಾರಾಂಶ

ಕ್ರಿಸ್ಮಸ್ ರಜೆಗೆ ಕುಟುಂಬ ಸಮೇತರಾಗಿ ಸ್ವಂತ ವಾಹನದಲ್ಲಿ ಟೂರ್ ಗೆ ಹೊರಟವರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿರೋದು ಖುಷಿ ನೀಡಿದೆ. ಹಾಗಾದ್ರೆ ನಿಮ್ಮ ವಾಹನಕ್ಕೆ ಇಂಧನ ತುಂಬಿಸಿಕೊಳ್ಳೋ ಮುನ್ನ ಇಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎಂಬುದನ್ನು ಚೆಕ್ ಮಾಡಿ.  

ಬೆಂಗಳೂರು (ಡಿ.24): ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ(Crude oil) ಏರಿಕೆಯಾಗುತ್ತಿದ್ದರೂ ದೇಶದಲ್ಲಿ ಮಾತ್ರ  ಪೆಟ್ರೋಲ್ (Petrol)ಹಾಗೂ ಡೀಸೆಲ್  (Diesel)ಬೆಲೆಯಲ್ಲಿ (Price)ಯಾವುದೇ ಬದಲಾವಣೆಯಾಗಿಲ್ಲ. ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್  ಬೆಲೆ ಮೇಲಿನ ಅಬಕಾರಿ ಸುಂಕ (excise duty) ಕಡಿತಗೊಳಿಸಿದ ಕಾರಣ ಇಂಧನ ದರದಲ್ಲಿ ಇಳಿಕೆಯಾಗಿತ್ತು. ಕೇಂದ್ರ ಸರ್ಕಾರದ ನಿರ್ಧಾರದ ಬೆನ್ನಲ್ಲೇ  ಕೆಲವು ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಗಳನ್ನು ಕಡಿತಗೊಳಿಸಿದ್ದವು. ಇದ್ರಿಂದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗಿತ್ತು. ಆದ್ರೆ ಆ ಬಳಿಕ ದೆಹಲಿ ಹೊರತುಪಡಿಸಿದ್ರೆ ದೇಶದ ಬೇರೆ ಯಾವ ನಗರಗಳಲ್ಲಿಯೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಚಿಲ್ಲರೆ ಹಾಗೂ ಸಗಟು ಹಣದುಬ್ಬರದ ಏರಿಕೆಯಿಂದ ಕಂಗ್ಗೆಟ್ಟಿರೋ  ಜನಸಾಮಾನ್ಯರಿಗೆ ಇದು  ಕೊಂಚ ಮಟ್ಟಿಗೆ ನೆಮ್ಮದಿ ನೀಡಿದೆ. ಹಾಗಾದ್ರೆ ಬೆಂಗಳೂರು(Bengaluru)  ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.24) ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಇದೆ.  ಡೀಸೆಲ್ ಬೆಲೆ ಇಂದು 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.  ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ.  ಇನ್ನು ಡೀಸೆಲ್ ದರ ಇಂದು ಲೀಟರ್ ಗೆ   84.56ರೂ. ಇದೆ. ನಿನ್ನೆ ಕಲಬುರಗಿಯಲ್ಲಿ(Kalburgi)ಪೆಟ್ರೋಲ್  ಬೆಲೆ ಲೀಟರ್ ಗೆ 101.04ರೂ. ಇತ್ತು. ಇಂದು 0.76ರೂ. ಇಳಿಕೆಯಾಗಿ 100.28ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 85.45ರೂ. ಇತ್ತು. ಇಂದು 84.77ರೂ. ಇದೆ. ಅಂದ್ರೆ 0.68ರೂ. ಇಳಿಕೆಯಾಗಿದೆ.  

PM Jan Dhan OD Limit:ಜನ್ ಧನ್ ಖಾತೆಯಲ್ಲಿ ಶೂನ್ಯ ಬ್ಯಾಲೆನ್ಸ್ ಇದ್ರೂ ಸಿಗುತ್ತೆ 10 ಸಾವಿರ; ಹೇಗೆ ಗೊತ್ತಾ?

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Changes In GST:ಜನವರಿ 1ರಿಂದ ಪರೋಕ್ಷ ತೆರಿಗೆ ಪದ್ಧತಿ ಬಿಗಿ; ಜಿಎಸ್ ಟಿಯಲ್ಲಿ 12 ಬದಲಾವಣೆಗಳು

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌