Petrol Diesel Rate:ರಾಜ್ಯದಲ್ಲಿ ಇಂಧನ ಬೇಡಿಕೆ ತಗ್ಗಿಸಿದ ವೀಕೆಂಡ್ ಕರ್ಫ್ಯೂ; ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

By Suvarna NewsFirst Published Jan 15, 2022, 10:45 AM IST
Highlights

ಸಂಕ್ರಾಂತಿ ಸಂಭ್ರಮಕ್ಕೆ ಕೊರೋನಾ ಅಡ್ಡಿಯಾಗಿರಬಹುದು. ಮನೆಯಿಂದ ಹೊರಬರಲು ಕರ್ಫ್ಯೂ ತಡೆಯಾಗಿರಬಹುದು.ಆದ್ರೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಇದ್ಯಾವುದೂ ಪರಿಣಾಮ ಬೀರಿಲ್ಲ.ಇಂದು ಕೂಡ ಇಂಧನ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. 

ಬೆಂಗಳೂರು (ಜ.15): ದೇಶದಲ್ಲಿ ಒಮಿಕ್ರಾನ್ (Omicron), ಕೊರೋನಾ (Corona) ಪ್ರಕರಣಗಳ ಹೆಚ್ಚಳ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಬೆಲೆ ಮೇಲೆ ಪರಿಣಾಮ ಬೀರಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಆದ್ರೆ ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಕಾರಣಕ್ಕೆ ಇಂಧನ ಬೇಡಿಕೆ ಕುಗ್ಗಿರೋದಂತೂ ನಿಜ. ಶನಿವಾರ ಹಾಗೂ ಭಾನುವಾರ ಕರ್ಫ್ಯೂ ಕಾರಣಕ್ಕೆ ಜನರ ಓಡಾಟಕ್ಕೆ ಬ್ರೇಕ್ ಬಿದ್ದಿರೋದ್ರಿಂದ ಸಹಜವಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೇಡಿಕೆ ತಗ್ಗಿದೆ.  ಇನ್ನು ರಾಜ್ಯದಲ್ಲಿ ನವೆಂಬರ್ 4ರ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.15) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
*ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. 
*ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.30ರೂ. ಹಾಗೂ ಡೀಸೆಲ್ ಬೆಲೆ 84.78ರೂ.ಇದೆ. 
*ಮಂಗಳೂರಿನಲ್ಲಿ(Mangalore) ಪೆಟ್ರೋಲ್  ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 
*ಮೈಸೂರಿನಲ್ಲಿ(Mysore)ಪೆಟ್ರೋಲ್ ದರ ಲೀಟರ್ ಗೆ  100.08ರೂ.ಇದೆ. ಡೀಸೆಲ್ ದರ ಇಂದು ಲೀಟರ್ ಗೆ  84. 56ರೂ. ಇದೆ. 
*ಕಲಬುರಗಿಯಲ್ಲಿ(Kalburgi)ಪೆಟ್ರೋಲ್  ದರ ಲೀಟರ್ ಗೆ 100.69ರೂ. ಹಾಗೂ ಡೀಸೆಲ್ ಗೆ 85.14ರೂ. ಇದೆ. 

Union Budget 2022: ಕೇಂದ್ರ ಬಜೆಟ್ ಮಂಡನೆ ಫೆಬ್ರವರಿ 1ಕ್ಕೆ ಫಿಕ್ಸ್ ; ಜ. 31ರಿಂದ ಸಂಸತ್ತಿನ ಅಧಿವೇಶನ ಆರಂಭ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"


 

click me!