ಅನ್ನದಾತನ ಮರೆತರಾ ಮೋದಿ?: ಒಂದೂ ಘೋಷಣೆ ಇಲ್ಲ ನೋಡಿ!

Published : Jul 05, 2019, 03:31 PM ISTUpdated : Jul 05, 2019, 03:41 PM IST
ಅನ್ನದಾತನ ಮರೆತರಾ ಮೋದಿ?: ಒಂದೂ ಘೋಷಣೆ ಇಲ್ಲ ನೋಡಿ!

ಸಾರಾಂಶ

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ಕೃಷಿಗೆ ಯಾವುದೇ ಹೊಸ ನೀತಿ, ಯೋಜನೆ ಪ್ರಕಟಿಸದ ನಿರ್ಮಲಾ| ದೇಶದ ರೈತರನ್ನು ಮರೆತರಾದ ಪ್ರಧಾನಿ ಮೋದಿ?| ನರೇಗಾ ಕೂಲಿ ಹೆಚ್ಚಳದ ಬಗ್ಗೆಯೂ ಪ್ರಸ್ತಾಪಿಸದ ನಿರ್ಮಲಾ| ನರೇಗಾ ಕೂಲಿ ಹೆಚ್ಚಳ ಬೇಡಿಕೆಗೆ ಮಣೆ ಹಾಕದ ಕೇಂದ್ರ ಸರ್ಕಾರ|

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಆದರೆ ಕೃಷಿ ವಲಯಕ್ಕೆ ಈ ಬಾರಿಯ ಬಜೆಟ್'ನಲ್ಲಿ ಹೆಚ್ಚಿನ ಉತ್ತೇಜನ ಸಿಗದಿರುವುದು ಅನ್ನದಾತನಿಗೆ ನಿರಾಸೆ ಮೂಡಿಸಿದೆ. ಈ ಬಾರಿಯ ಬಜೆಟ್'ನಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದಂತೆ ಯಾವುದೇ ಹೊಸ ಯೋಜನೆ ಘೋಷಣೆಯಾಗಿಲ್ಲ.

ನರೇಗಾ ಕೂಲಿ ಹೆಚ್ಚಳದ ಬೇಡಿಕೆಗೆ ಮೋದಿ ಸರ್ಕಾರ ಮಣೆ ಹಾಕಿಲ್ಲ. ಆದರೆ ಹಿಂದಿನ ಬಾರಿ ಘೋಷಿಸಿದ್ದ ರೈತರಿಗೆ ವಾರ್ಷಿಕ 6 ಸಾವಿರ ರೂ. ಸಹಾಯಧನದ ಯೋಜನೆ ಮುಂದುವರೆಸಲಾಗಿದೆ. ಆದರೆ ಈ ಸಹಾಯಧನ ಮತ್ತಷ್ಟು ಹೆಚ್ಚಳವಾಗುವ ನಿರೀಕ್ಷೆಯೂ ಹುಸಿಯಾಗಿದೆ.

ಇನ್ನು ಶೂನ್ಯ ಬಂಡವಾಳ ಕೃಷಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕೃಷಿ ಆಧಾರಿತ ಕೈಗಾರಿಕೆಗಳಲ್ಲಿ ಖಾಸಗಿ ಹೂಡಿಕೆಗೆ ಸರ್ಕಾರ ಮುಂದಾಗಿದೆ. ಕೃಷಿಕರಿಗೆ ಸೂಕ್ತ ಬೆಲೆ ಮತ್ತು ಮಾರತುಕಟ್ಟೆ ವ್ಯವಸ್ಥೆಗೆ 10 ಸಾವಿರ ಹೊಸ ಕೃಷಿಕರ ಸಂಘ ಸ್ಥಾಪಿಸಲು ನಿರ್ಧರಿಸಲಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

YouTube ನಲ್ಲಿ ಗೋಲ್ಡನ್ ಬಟನ್ ಸಿಕ್ಕಿದ್ರೆ ಹಣದ ಹೊಳೆ, ಜಾಸ್ತಿ ಆಗುತ್ತೆ ತೆರಿಗೆ ಭಾರ
ಒನ್‌8 ಬ್ರ್ಯಾಂಡ್‌ ಸೇಲ್‌: ತನ್ನ ಆಪ್ತ ಗೆಳೆಯನ ಈ ಸಂಸ್ಥೆಯಲ್ಲಿ ಕೊಹ್ಲಿ 40 ಕೋಟಿ ಹೂಡಿಕೆ!