
ಮುಂಬೈ: ಇಲ್ಲಿನ ಅಂತರ್ ಬ್ಯಾಂಕ್ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತ ಮುಂದುವರೆದಿದ್ದು, ಬುಧವಾರ 61 ಪೈಸೆಗಳಷ್ಟು ಭಾರೀ ಕುಸಿತ ಕಂಡು 83.01 ರೂ.ನಲ್ಲಿ ಮುಕ್ತಾಯವಾಗಿದೆ. ಡಾಲರ್ ಎದುರು ರುಪಾಯಿ ಮೌಲ್ಯ 83 ರುಪಾಯಿಗಳ ಗಡಿದಾಟಿದ್ದು ಇದೇ ಮೊದಲು.
ಭಾರತೀಯ ಷೇರುಪೇಟೆಯಿಂದ (Indian Share Market) ವಿದೇಶಿ ಸಾಂಸ್ಥಿಕೆ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹಣ ಹಿಂಪಡೆಯುತ್ತಿರುವುದು ಮತ್ತು ವಿದೇಶಿ ಮಾರುಕಟ್ಟೆಗಳಲ್ಲಿ ಡಾಲರ್ ಮೌಲ್ಯ ಮತ್ತಷ್ಟು ಚೇತರಿಕೆಯಾಗಿರುವುದು ರುಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎನ್ನಲಾಗಿದೆ. ಇದರ ಜೊತೆಗೆ ಜಾಗತಿಕ ಮಾರುಕಟ್ಟೆಯಲ್ಲಿ (Global Market) ಕಚ್ಚಾತೈಲ (Crude Oil)ಬೆಲೆ ಏರುತ್ತಿರುವುದು, ಸ್ಥಳೀಯ ಕರೆನ್ಸಿಯಲ್ಲಿ ಹೂಡಿಕೆ ಮಾಡಲು ವಿದೇಶಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಕೂಡಾ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ.
2047ರ ವೇಳೆಗೆ Indian Economy 30 ಟ್ರಿಲಿಯನ್ ಡಾಲರ್ ಮೌಲ್ಯ ಆಗಲಿದೆ: Piyush Goyal ವಿಶ್ವಾಸ
ರೂಪಾಯಿ ಮೌಲ್ಯ ಕುಸಿಯುತ್ತಿಲ್ಲ; ಡಾಲರ್ ಬಲವಾಗುತ್ತಿದೆ: Nirmala Sitharaman
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.