ವಿಕೆಂಡ್‌ನಲ್ಲಿ ಪೆಟ್ರೋಲ್ ದರ: ಇನ್ನೂ ಬರಬೇಕಿದೆ ಭಾನುವಾರ!

By Web DeskFirst Published Nov 24, 2018, 1:03 PM IST
Highlights

ಮತ್ತೆ ಇಳಿಕೆಯತ್ತ ಮುಖ ಮಾಡಿದ ತೈಲದರ! ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದರ ಇಳಿಕೆ! ಭಾರತೀಯ ತೈಲ ಮಾರುಕಟ್ಟೆ ಮೇಲೆ ಧನಾತ್ಮಕ ಪರಿಣಾಮ! ದೇಶದ ಮಹಾನಗರಗಳಲ್ಲಿ ಇಳಿಕೆಯತ್ತ ಮುಖ ಮಾಡಿದ ತೈಲದರ

ನವದೆಹಲಿ(ನ.24): ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪೆಟ್ರೋಲ್‌, ಡೀಸೆಲ್ ದರದಲ್ಲಿ ಗಮನಾರ್ಹ ಇಳಿಕೆ ಕಂಡು ಬಂದಿದೆ.

ಸತತ ಏಳನೇ ವಾರವೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗಿದೆ. ಹೀಗಾಗಿ ಭಾರತೀಯ ಮಾರುಕಟ್ಟೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 32 ಪೈಸೆ ಮತ್ತು ಡೀಸೆಲ್ ದರದಲ್ಲಿ 40 ಪೈಸೆ ಇಳಿಕೆ ಕಂಡಿದೆ.

ಅದರಂತೆ ದೇಶದ ಮಹಾನಗರಗಳಲ್ಲಿ ಇಂದಿನ ಪೆಟ್ರೋಲ್, ಡೀಸೆಲ್ ಬೆಲೆಯತ್ತ ಗಮನ ಹರಿಸುವುದಾದರೆ..

ರಾಷ್ಟ್ರ ರಾಜಧಾನಿ ನವದೆಹಲಿ-

ಪೆಟ್ರೋಲ್ ದರ: 75.25 ರೂ.

ಡೀಸೆಲ್ ದರ: 70.16 ರೂ.

ವಾಣಿಜ್ಯ ರಾಜಧಾನಿ ಮುಂಬೈ-

ಪೆಟ್ರೋಲ್ ದರ: 80.79 ರೂ.

ಡೀಸೆಲ್ ದರ: 73.48 ರೂ.

ಪ.ಬಂಗಾಳ ರಾಜಧಾನಿ ಕೋಲ್ಕತ್ತಾ-

ಪೆಟ್ರೋಲ್ ದರ: 77.22 ರೂ.

ಡೀಸೆಲ್ ದರ: 72.01 ರೂ.

ತಮಿಳುನಾಡು ರಾಜಧಾನಿ ಚೆನ್ನೈ-

ಪೆಟ್ರೋಲ್ ದರ: 78.12 ರೂ.

ಡೀಸೆಲ್ ದರ: 74.13 ರೂ.

ರಾಜ್ಯ ರಾಜಧಾನಿ ಬೆಂಗಳೂರು-

ಪೆಟ್ರೋಲ್ ದರ: 75.84  ರೂ.

ಡೀಸೆಲ್ ದರ: 70.93 ರೂ.

ಇಂಧನ ದರ ಇಳಿಯುತ್ತಿರುವುದು, ಡಾಲರ್‌ ಎದುರು ರೂಪಾಯಿ ಮೌಲ್ಯ ಬಲಗೊಳ್ಳುತ್ತಿರುವುದು ದೇಶದ ಆರ್ಥಿಕತೆ ಮೇಲೆ ಸಕಾರಾತ್ಮಕ ಪ್ರಭಾವ ಬೀರಿವೆ.

click me!