
ಬೆಂಗಳೂರು (ಜ. 8): ಹೊಸ ವರ್ಷ ಆರಂಭವಾಗಿ ಒಂದು ವಾರ ಕಳೆದಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಕಳೆದ ಒಂದು ವಾರದಲ್ಲಿ ಸ್ಥಿರವಾಗಿರುವುದು ವಾಹನ ಸವಾರರಿಗೆ ಕೊಂಚ ನೆಮ್ಮದಿ ತಂದಿದೆ. ಜಗತ್ತಿನಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್(Omicron) ಭೀತಿ ಮಡುಗಟ್ಟಿರೋ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude oil)ಬೆಲೆಯಲ್ಲಿ ನಿರಂತರ ಏರಿಳಿತ ಕಂಡುಬರುತ್ತಿದೆ. ಆದ್ರೆ ಈ ಬೆಲೆ ವ್ಯತ್ಯಯ ದೇಶೀಯ ಮಾರುಕಟ್ಟೆ ಮೇಲೆ ಈ ತನಕ ಯಾವುದೇ ಪರಿಣಾಮ ಬೀರಿಲ್ಲ. ಕಳೆದ ವರ್ಷದ ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕ(excise duty)ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿತ್ತು. ಜನವರಿ 8 ರಂದು ರಾಜ್ಯಾದ್ಯಂತ ಇರುವ ಪೆಟ್ರೋಲ್, ಡೀಸೆಲ್ ದರ ಇಲ್ಲಿದೆ.
"
ರಾಜ್ಯದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂಧನ ದರ
* ಬೆಂಗಳೂರಿನಲ್ಲಿ (Bengaluru) ಪೆಟ್ರೋಲ್ ದರ 100.58 ರೂ. ಹಾಗೂ ಡೀಸೆಲ್ ದರ 85.01ರೂ. ಆಗಿದೆ. ಕಳೆದೊಂದು ವಾರದಿಂದ ಯಾವುದೇ ಬದಲಾವಣೆ ಕಂಡಿಲ್ಲ
* ಹುಬ್ಬಳ್ಳಿಯಲ್ಲಿ (Hubballi) ಪೆಟ್ರೋಲ್ ದರ 100.31 ರೂ. ಆಗಿದ್ದರೆ, ಡೀಸೆಲ್ ದರ 84.79ರೂ. ಆಗಿದೆ. ಪೆಟ್ರೋಲ್ ದರದಲ್ಲಿ 10 ಪೈಸೆ ಹಾಗೂ ಡೀಸೆಲ್ ದರದಲ್ಲಿ 9 ಪೈಸೆ ಕಡಿಮೆಯಾಗಿದೆ
* ಮಂಗಳೂರಿನಲ್ಲಿ (Mangaluru) ಪೆಟ್ರೋಲ್ ದರ 99.76 ರೂ ಹಾಗೂ ಡೀಸೆಲ್ ದರ 84.24 ರೂಪಾಯಿ ಆಗಿದೆ. ಮಂಗಳೂರಿನಲ್ಲಿ ದರದಲ್ಲಿ ಕಳೆದ 15 ದಿನಗಳಿಂದ ಯಾವುದೇ ಬದಲಾವಣೆಯಾಗಿಲ್ಲ.
*ಮೈಸೂರಿನಲ್ಲಿ (Mysore) ಪೆಟ್ರೋಲ್ ದರ 100.08ರೂ. ಆದರೆ ಡೀಸೆಲ್ ದರ 84.56 ರೂಪಾಯಿ ಆಗಿದೆ. ಸತತ ಮೂರನೇ ದಿನ ದರದಲ್ಲಿ ಸ್ಥಿರತೆ ಕಾಯ್ದುಕೊಂಡಿದೆ.
* ಕಲಬುರಗಿಯಲ್ಲಿ (Kalaburagi) ಸಾಮಾನ್ಯವಾಗಿ ಏರಿಳಿತ ಕಾಣುತ್ತಿದ್ದ ದರದಲ್ಲಿ ಶನಿವಾರ ಯಾವುದೇ ಬದಲಾವಣೆ ಆಗಿಲ್ಲ. ಇಲ್ಲಿ ಪೆಟ್ರೋಲ್ ದರ 101.04 ರೂಪಾಯಿ ಆಗಿದ್ದರೆ, ಡೀಸೆಲ್ ದರ 85.45 ಆಗಿದೆ.
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.