Petrol Diesel Rate : ಮೈಸೂರಿನಲ್ಲಿ ಇಂಧನ ದರ ಕೊಂಚ ಇಳಿಕೆ, ಬೆಂಗಳೂರಿನಲ್ಲಿ ಸ್ಥಿರ

By Suvarna NewsFirst Published Jan 19, 2022, 11:00 AM IST
Highlights

ಮೈಸೂರು, ಕಲಬುರಗಿಯಲ್ಲಿ ಇಂಧನ ದರದಲ್ಲಿ ಕೊಂಚ ಬದಲಾವಣೆ
ಬೆಂಗಳೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ದರ ಸ್ಥಿರ
ರಾಜ್ಯದಲ್ಲಿ ಜನವರಿ 19ರ ಪೆಟ್ರೋಲ್, ಡೀಸೆಲ್ ದರ ಹೀಗಿದೆ

ಬೆಂಗಳೂರು (ಜ. 18): ರಾಜ್ಯ ಸರ್ಕಾರ ಕೋವಿಡ್ ನಿಯಮಾವಳಿಗಳಲ್ಲಿ ಕೊಂಚ ಬದಲಾವಣೆ ತರಲಿರುವ ಸಮಾಧಾನದ ನಡುವೆ ರಾಜ್ಯದಲ್ಲಿ ಇಂಧನ ದರಗಳೂ ಸ್ಥಿರವಾಗಿರುವುದು ಜನರ ಸಮಾಧಾನಕ್ಕೆ ಕಾರಣವಾಗಿದೆ. ದೆಹಲಿ ಹಾಗೂ ಜಾರ್ಖಂಡ್ ಹೊರತುಪಡಿಸಿ ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಹೆಚ್ಚಿನ ಬದಲಾವಣೆ ಆಗಿಲ್ಲ. ಇಂಧನ ದರದಲ್ಲಿ ನಿರಂತರವಾಗಿ ಆಗುತ್ತಿದ್ದ ಏರಿಕೆಯಿಂದಾಗಿ ರೋಸಿಹೋಗಿದ್ದ ಜನತೆಗೆ ದೀಪಾವಳಿಯ ಉಡುಗೊರೆ ಎನ್ನುವ ರೀತಿಯಲ್ಲಿ ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು (Excise Duty) ಕಡಿತ ಮಾಡಿತ್ತು. ದೇಶದ ಸಾಮಾನ್ಯ ಜನತೆ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನಷ್ಟು ತಗ್ಗಬೇಕು ಎಂದು ಬಯಸಿದ್ದರೂ, ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಅಲ್ಪ ಸಮಾಧಾನ ಕಂಡಿದ್ದಾರೆ. ಈ ನಡುವೆ ಕೋವಿಡ್-19 ಹಾಗೂ ಒಮಿಕ್ರಾನ್ ಆತಂಕದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಿರುವುದು ಇಂಧನದ ಬೇಡಿಕೆಯ ಮೇಲೂ ಪರಿಣಾಮ ಬೀರಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.19) ಪೆಟ್ರೋಲ್ ಹಾಗೂ ಡೀಸೆಲ್ ದರದ ವಿವರ..
"

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂಧನ ದರದಲ್ಲಿ ಯಥಾಸ್ಥಿತಿ ಉಳಿದುಕೊಂಡಿದೆ. ಪೆಟ್ರೋಲ್ ಲೀಟರ್ ಗೆ 100.58 ರೂಪಾಯಿ ಆಗಿದ್ದರೆ, ಡೀಸೆಲ್ 85.01 ರೂಪಾಯಿ ಆಗಿದೆ.
- ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. 
- ಕರಾವಳಿ ಮಂಗಳೂರಿನಲ್ಲಿ(Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 
- ಮೈಸೂರಿನಲ್ಲಿ(Mysore)ಪೆಟ್ರೋಲ್ ದರದಲ್ಲಿ 25 ಪೈಸೆ ಹಾಗೂ ಡೀಸೆಲ್ ದರದಲ್ಲಿ 22 ಪೈಸೆ ಕಡಿತವಾಗಿದೆ. ಮೈಸೂರಿನಲ್ಲಿ ಇಂದಿನ ಪೆಟ್ರೋಲ್ ದರ 100.08 ರೂಪಾಯಿ ಆಗಿದ್ದರೆ, ಡೀಸೆಲ್ ದರ 84.56 ರೂಪಾಯಿ ಆಗಿದೆ.
- ಕಲಬುರಗಿಯಲ್ಲಿ(Kalburgi) ಪೆಟ್ರೋಲ್  ದರ ಲೀಟರ್ ಗೆ 100.02ರೂ. ಹಾಗೂ ಡೀಸೆಲ್ ಗೆ 85.43ರೂ. ಇದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಸತತ 2ನೇ ದಿನ ತಲಾ 2 ಪೈಸೆ ಕಡಿಮೆಯಾಗಿದೆ.

Budget 2022 Expectations: ಗೃಹ ಸಾಲದ ಬಡ್ಡಿ ಮೇಲೆ 5 ಲಕ್ಷ ರೂ. ಆದಾಯ ತೆರಿಗೆ ಕಡಿತದ ನಿರೀಕ್ಷೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮ
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Mukesh Ambani: 984 ಕೋಟಿಗೆ ಅಂಬಾನಿಯಿಂದ ರೋಬೋಟ್‌ ಸ್ಟಾರ್ಟಪ್‌ ಖರೀದಿ
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

click me!