ಜನಸಾಮಾನ್ಯರಿಗೆ ಗುಡ್ ನ್ಯೂಸ್, ಪೆಟ್ರೋಲ್ ಡೀಸೆಲ್ ಬೆಲೆ ಶೀಘ್ರದಲ್ಲೆ ಕಡಿತ!

By Suvarna News  |  First Published Dec 11, 2023, 3:38 PM IST

ಜನಸಾಮಾನ್ಯರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. OMC ಈಗಾಗಲೇ ಸರ್ಕಾರದ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ. ಶೀಘ್ರದಲ್ಲೇ ಅಂತಿಮ ನಿರ್ಧಾರ ಘೋಷಣೆಯಾಗಲಿದೆ.


ನವದೆಹಲಿ(ಡಿ.11) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದ ತೀವ್ರ ಟೀಕೆಗೊಳಗಾಗಿದ್ದ ಮೋದಿ ಸರ್ಕಾರ ಇದೀಗ ಜನಸಾಮಾನ್ಯರಿಗೆ ಗುಡ್ ನೀಡಲು ಸಜ್ಜಾಗಿದೆ. ಶೀಘ್ರದಲ್ಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗಲಿದೆ. ಆಯಿಲ್ ಮಾರ್ಕೆಟಿಂಗ್ ಕಂಪನಿ(OMC) ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾತುಕತೆ ಆರಂಭಗೊಂಡಿರುವುದು, ಬಿಜೆಪಿ ಉತ್ಸಾಹ ಇಮ್ಮಡಿಗೊಳಿಸಿದೆ.  

ಈ ವರ್ಷದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಬಹುತೇಕ ಸ್ಥಿರವಾಗಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಾದ ಏರಿಕೆಯಿಂದ ಕಳೆದ ವರ್ಷ ಪೆಟ್ರೋಲ್ ಲೀಟರ್ ಬೆಲೆ 115 ರೂಪಾಯಿಗೂ ಅಧಿಕವಾಗಿತ್ತು.  ಆದರೆ ಕೇಂದ್ರ ಸರ್ಕಾರದ ತೆರಿಗೆ ಕಡಿತಗೊಳಿಸಿ ಬೆಲೆ ಏರಿಕೆ ಬಿಸಿಯನ್ನು ಕೊಂಚ ಮಟ್ಟಿಗೆ ತಣ್ಣಗೆ ಮಾಡಿತ್ತು. ಆದರೂ 100 ರೂಪಾಯಿ ಗಡಿ ದಾಟಿತ್ತು. ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಣನೀಯವಾಗಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 

Tap to resize

Latest Videos

Petrol Diesel Price Today: ಸೋಮವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ತೈಲ ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಈ ಕುರಿತು ತೈಲ ಕಂಪನಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಈ  ವರ್ಷದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 8 ರಿಂದ 10 ರೂಪಾಯಿ ಹಾಗೂ ಡೀಸೆಲ್ ಮೇಲೆ 3 ರಿಂದ 4 ರೂಪಾಯಿ ಲಾಭ ಗಳಿಸಿದೆ. 

ಕಳೆದೆರಡು ವರ್ಷದಲ್ಲಿ ತೈಲ ಕಂಪನಿಗಳಿಗೆ ಆದ ನಷ್ಟವನ್ನು ಈ ವರ್ಷ ಸರಿದೂಗಿಸುವ ಪ್ರಯತ್ನ ಮಾಡಿದೆ. IOC, HPCL ಹಾಗೂ BPCL ಸೇರಿದಂತೆ ತೈಲ ಕಂಪನಿಗಳು ಈ ವರ್ಷ 28,000 ಕೋಟಿ ರೂಪಾಯಿ ಲಾಭಗಳಿಸಿದೆ. ಈ ಲಾಭದಿಂದ ಗ್ರಾಹಕರ ಮೇಲಿನ ಹೊರೆಯನ್ನು ತಗ್ಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಿಂದ ಕೇಂದ್ರ ಸರ್ಕಾರ ಎದುರಿಸುವ ಹಣದುಬ್ಬರ ಸವಾಲನ್ನು ತಕ್ಕ ಮಟ್ಟಿಗೆ ನಿಯಂತ್ರಿಸಲು ಸಾಧ್ಯವಿದೆ.

ಗ್ಯಾಸ್‌ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಮಾಡಿದ ಕೇಂದ್ರ ಸರ್ಕಾರ, ಹೊಸ ದರ ಇಲ್ಲಿದೆ

ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ  ಬೆಲೆ ಪ್ರತಿ ಬ್ಯಾರೆಲ್‌ಗೆ 75 ರಿಂದ 80 ಅಮೆರಿಕನ್ ಡಾಲರ್. ಈ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಾಸಗಾಗಿಲ್ಲ. ಇದೀಗ ತೈಲ ಕಂಪನಿಗಳ ಜೊತೆಗೆ ಮಾತುಕತೆ ಬಹುತೇಕ ಯಶಸ್ವಿಯಾಗಿದೆ.ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುತ್ತಿರುವುದು ಮೋದಿ ಸರ್ಕಾರಕ್ಕೆ ಆರಂಭಿಕ ಯಶಸ್ಸು ನೀಡಿದೆ.
 

click me!