
ಬೆಂಗಳೂರು (ನ.26): ತಿಂಗಳ ಹಿಂದೆ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ (Rate) ನಾಗಲೋಟದ ಏರಿಕೆ ಕಂಡಿತ್ತು. ಪೆಟ್ರೋಲ್ ಬೆಲೆ 100ರ ಗಡಿ ದಾಟಿ ಜನಸಾಮಾನ್ಯರ ನಿದ್ದೆಗೆಡಿಸಿತ್ತು.ಆದ್ರೆ ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರವಾಗಿದೆ. ಇಂದು (ನ.26) ಕೂಡ ಅಂಥ ಯಾವುದೇ ಬದಲಾವಣೆಯಾಗಿಲ್ಲ.ಇದು ಸಾಮಾನ್ಯಜನರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ತರಿಸೋ ವಿಷಯ.ನಿತ್ಯ ಬಳಕೆ ವಸ್ತುಗಳ ಬೆಲೆ ಮೇಲೂ ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಣಾಮ ಬೀರಿದ್ದು,ತರಕಾರಿ (Vegetable) ಬೆಲೆಯಂತೂ ಗಗನಕ್ಕೇರಿದೆ. ಈ ಎಲ್ಲ ತೊಂದರೆಗಳ ನಡುವೆಯೂ ಕೆಲವು ದಿನಗಳಿಂದ ಇಂಧನ ಬೆಲೆ ಸ್ಥಿರತೆ ಕಾಯ್ದುಕೊಂಡಿರೋದು ಕೊಂಚ ರಿಲೀಫ್ (relief) ನೀಡಿದೆ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ(Cities)ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ.
ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ದರ ಲೀಟರ್ ಗೆ 100.65 ರೂ. ಹಾಗೂ ಡೀಸೆಲ್ ದರ 85.08 ರೂ.ಇದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.65 ರೂ. ಹಾಗೂ ಡೀಸೆಲ್ ಬೆಲೆ 85.10 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ (Mysore)ಪೆಟ್ರೋಲ್ ಗೆ 100.51 ರೂ. ಹಾಗೂ ಡೀಸೆಲ್ ಗೆ 84.95ರೂ.ದರವಿದೆ. ಬಿಸಿಲ ನಗರ ಕಲಬುರಗಿಯಲ್ಲಿ (Kalburgi) ಪೆಟ್ರೋಲ್ ಗೆ 100.65 ರೂ. ಹಾಗೂ ಡೀಸೆಲ್ ಗೆ 85.10 ರೂ.ಇದೆ.
ನಗರದಲ್ಲಿ ಕೈ ಸುಡುತ್ತಿದೆ ಟೊಮೆಟೋ ಬೆಲೆ
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್ ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ. ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು. ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
Bank Holiday:ಡಿಸೆಂಬರ್ ನಲ್ಲಿ12 ದಿನ ಬ್ಯಾಂಕ್ ಕ್ಲೋಸ್!
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು. ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.