ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕ ಕಡಿತಗೊಳಿಸಿದ ಕಾರಣ ಕಳೆದ 21 ದಿನಗಳಿಂದ ಇವುಗಳ ಬೆಲೆಯಲ್ಲಿ ಗಮನಾರ್ಹ ಏರಿಳಿತ ಕಂಡುಬಂದಿಲ್ಲ. ರಾಜ್ಯದ ವಿವಿಧ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರಗಳ ಮಾಹಿತಿ ಇಲ್ಲಿದೆ.
ಬೆಂಗಳೂರು (ನ.24): ಕಳೆದ ತಿಂಗಳು ಸತತ ಏರಿಕೆ ಕಂಡಿದ್ದ ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆಯಲ್ಲಿ ಕಳೆದ 21 ದಿನಗಳಿಂದ ಯಾವುದೇ ಗಮನಾರ್ಹ ಏರಿಳಿತ ಕಂಡುಬಂದಿಲ್ಲ.ಇಂದು (ನ.25) ಕೂಡ ಅಂಥ ಯಾವುದೇ ಬದಲಾವಣೆಯಾಗಿಲ್ಲ.ಕೇಂದ್ರ (Central)ಹಾಗೂ ರಾಜ್ಯ (State) ಸರ್ಕಾರಗಳು ಕೆಲವು ವಾರಗಳ ಹಿಂದೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು(tax) ಕಡಿತಗೊಳಿಸಿದ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಅಂಥ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ. ಆದ್ರೂ ನಿರಂತರ ಮಳೆ ಹಾಗೂ ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಿರೋದ್ರಿಂದ ತರಕಾರಿ (Vegetables) ಸೇರಿದಂತೆ ನಿತ್ಯ ಬಳಕೆ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ಇದ್ರಿಂದ ಬಡ (Poor) ಹಾಗೂ ಮಧ್ಯಮ ವರ್ಗದ (Middle class) ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ ಕೂಡ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ, ನೋಡೋಣ ಬನ್ನಿ.
ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಪೆಟ್ರೋಲ್ ದರ ಲೀಟರ್‌ಗೆ 100.58 ರೂ. ಹಾಗೂ ಡೀಸೆಲ್ ದರ 85.01 ರೂ. ಇದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬೆಲೆ 100.55ರೂ. ಹಾಗೂ ಡೀಸೆಲ್ ಬೆಲೆ 85.01ರೂ. ಇದೆ. ಮಂಗಳೂರಿನಲ್ಲಿ ಪೆಟ್ರೋಲ್ ಬೆಲೆ 99.76ರೂ. ಹಾಗೂ ಪೆಟ್ರೋಲ್ ದರ 84.24ರೂ. ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಪೆಟ್ರೋಲ್‌ಗೆ 100.08ರೂ. ಹಾಗೂ ಡೀಸೆಲ್‌ಗೆ 84.24ರೂ. ದರವಿದೆ. ಬಿಸಿಲ ನಗರ ಕಲಬುರಗಿಯಲ್ಲಿ ಪೆಟ್ರೋಲ್‌ಗೆ 100.28 ರೂ. ಹಾಗೂ ಡೀಸೆಲ್‌ಗೆ 84.77ರೂ. ಇದೆ.
LPG ಗ್ರಾಹಕರಿಗೆ ಗುಡ್‌ನ್ಯೂಸ್, ಈಗ ಪ್ರತಿ ಸಿಲಿಂಡರ್ ಬೆಲೆ 300ರೂ. ಅಗ್ಗ!
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿ ಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್ ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ. ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು. ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
ಬಂಗಾರಪ್ರಿಯರೆ ಗಮನಿಸಿ, ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
ಜಿಎಸ್‌ಟಿ (GST) ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (ಉSಖಿ) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು. ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.