ವಾಹನ ಸವಾರರಿಗೆ ಇಂಧನ ದರ ಏರಿಕೆ ಶಾಕ್: 15 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಭಾರೀ ದುಬಾರಿ!

Published : Apr 05, 2022, 08:43 AM ISTUpdated : Apr 05, 2022, 08:44 AM IST
ವಾಹನ ಸವಾರರಿಗೆ ಇಂಧನ ದರ ಏರಿಕೆ ಶಾಕ್: 15 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಭಾರೀ ದುಬಾರಿ!

ಸಾರಾಂಶ

* ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆ * ಕಳೆದ 15 ದಿನಗಳಲ್ಲಿ 13ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ * ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ಸುಮಾರು 9.20 ರೂ. ಏರಿಕೆ

ನವದೆಹಲಿ(ಏ.05): ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಳೆದ 15 ದಿನಗಳಲ್ಲಿ 13ನೇ ಬಾರಿಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದೆ. ಕಳೆದ ಎರಡು ವಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ಸುಮಾರು 9.20 ರೂ. ಏರಿಕೆಯಾಗಿದ್ದು  ಹೊಸ ದರಗಳು ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಅನ್ವಯವಾಗಲಿದೆ.

ಹೌದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂದಿನ ಬೆಲೆ ಏರಿಕೆಯ ಬಳಿಕ (ಏಪ್ರಿಲ್ 5, 2022) ಇಂಧನ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಮಾರ್ಚ್ 22ರಿಂದ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ (15 ದಿನ) ಪೆಟ್ರೋಲ್ ಬೆಲೆ ಬೆಂಗಳೂರಿನಲ್ಲಿ ಪ್ರತಿ ಲೀಟರ್​ಗೆ ಸರಾಸರಿ 9.59 ರೂನಷ್ಟು ಹೆಚ್ಚಾಗಿದೆ.

Price Hike ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 250 ರೂಪಾಯಿ ಏರಿಕೆ, ಒಂದು ಸಿಲಿಂಡರ್ ಬೆಲೆ 2250 ರೂಪಾಯಿ!

ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಏಪ್ರಿಲ್‌ 5ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆ ಹೊಂದಿ, ಪ್ರತಿ ಲೀಟರ್‌ಗೆ ರೂ. 104.61 ಆಗಿದೆ. ಇನ್ನು ಡಿಸೇಲ್ ಬೆಲೆಯು ಕೂಡಾ ಲೀಟರ್‌ಗೆ 80 ಪೈಸೆ ಹೆಚ್ಚಳವಾಗಿ, 95.87ಗೆ ತಲುಪಿದೆ.

ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್​ಗೆ 80 ಪೈಸೆ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್​ಗೆ 84 ಪೈಸೆ ಹೆಚ್ಚಾಗಿದ್ದು, 110.25 ರೂಪಾಯಿ ಮಾರಾಟವಾಗುತ್ತಿದೆ. ಡೀಸೆಲ್ ದರ ಲೀಟರ್​ಗೆ 78 ಪೈಸೆ ಹೆಚ್ಚಾಗಿದ್ದು 94.01ರೂಪಾಯಿಗೆ ಮಾರಾಟವಾಗುತ್ತಿದೆ. ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಪೆಟ್ರೋಲ್ 9.59 ರೂಪಾಯಿ ಹಾಗೂ ಡೀಸೆಲ್ 8.98 ರೂಪಾಯಿ ಹೆಚ್ಚಾಗಿದೆ.

ಇಂಧನ ದರ ಏರಿಕೆ: ಬೆಲೆ ಏರಿಕೆಯಿಂದ ಪಾರಾಗಲು ಬಾಬಾ ರಾಮ್‌ದೇವ್ ವಿಭಿನ್ನ ಸಲಹೆ!

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡು ಬಂದಿದೆ. ಈ ಬೆನ್ನಲ್ಲೇ ದೇಶದಲ್ಲಿ ಸುಮಾರು 137 ದಿನಗಳ ನಂತರ ಪೆಟ್ರೋಲ್‌ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಪೆಟ್ರೋಲ್‌, ಡೀಸೆಲ್ ದರ ಕಳೆದ 15 ದಿನಗಳಲ್ಲಿ ಒಂದೆರಡು ದಿನ ಮಾತ್ರ ಸ್ಥಿರವಾಗಿದ್ದು, ಉಳಿದ ದಿನಗಳಲ್ಲಿ ಏರಿಕೆ ಕಂಡಿದೆ.

ಸ್ಥಳೀಯ ತೆರಿಗೆಯ ಆದಾರದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾವಣೆ ಆಗುತ್ತದೆ. ಮುಂಬೈ ಮೆಟ್ರೋ ನಗರಗಳಲ್ಲಿ ಹೆಚ್ಚಿನ ಇಂಧನ ಬೆಲೆ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ ಲೀಟರ್‌ಗೆ 119.67 ರೂಪಾಯಿ ಮತ್ತು 103.92 ರೂಪಾಯಿ ಆಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

ಈ ರಾಶಿ ಜನರು ಹೊಸ ವರ್ಷ 2026 ರಲ್ಲಿ ಲಕ್ಷಾಧಿಪತಿಗಳಾಗುತ್ತಾರೆ, ಬಂಪರ್ ಯಶಸ್ಸು, ಸಂತೋಷ ಮತ್ತು ಸಮೃದ್ಧಿ
2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?