ಪೆಟ್ರೋಲ್, ಡೀಸೆಲ್ ದರ 4.50 ರೂ. ಏರಿಕೆ!

Published : Jul 07, 2019, 09:01 AM IST
ಪೆಟ್ರೋಲ್, ಡೀಸೆಲ್ ದರ 4.50 ರೂ. ಏರಿಕೆ!

ಸಾರಾಂಶ

ಬಜೆಟ್‌ನಲ್ಲಿ ಘೋಷಣೆ ಬೆನ್ನಲ್ಲೇ ಏರಿಕೆಯಾಯ್ತು ಪೆಟ್ರೋಲ್, ಡೀಸೆಲ್ ದರ| ದೇಶಾದ್ಯಂತ ಪೆಟ್ರೋಲ್‌ 2.50, 2 ರಾಜ್ಯಗಳಲ್ಲಿ 4.50 ರುಪಾಯಿ ಏರಿಕೆ!

ನವದೆಹಲಿ[ಜು.07]: ಕೇಂದ್ರದ ಬಜೆಟ್‌ನಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಮಾಡಿದ ಬೆನ್ನಲ್ಲೇ, ದೇಶಾದ್ಯಂತ ಎಲ್ಲಾ ರಾಜ್ಯಗಳಲ್ಲೂ ಈ ಎರಡೂ ತೈಲೋತ್ಪನ್ನಗಳ ಬೆಲೆಯಲ್ಲಿ ತಲಾ 2.50 ರು.ವರೆಗೆ ಏರಿಕೆ ಆಗಿದೆ.

ದೆಹಲಿಯಲ್ಲಿ ಲೀ. ಪೆಟ್ರೋಲ್‌ಗೆ 72.96 ರು. ಹಾಗೂ ಡೀಸೆಲ್‌ಗೆ 66.69 ರು., ಮುಂಬೈನಲ್ಲಿ ಪೆಟ್ರೋಲ್‌ ದರ 78.57 ರು., ಡೀಸೆಲ್‌ಗೆ 69.60 ರು., ಕೋಲ್ಕತಾದಲ್ಲಿ ಪೆಟ್ರೋಲ್‌ಗೆ 75.15 ರು. ಹಾಗೂ ಚೆನ್ನೈನಲ್ಲಿ ಪೆಟ್ರೋಲ್‌ಗೆ 78.57 ರು.ಗೆ ತಲುಪಿದೆ.

ಇದೇ ವೇಳೆ ಕಾಂಗ್ರೆಸ್‌ ಆಡಳಿತಾರೂಢ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ರಾಜ್ಯ ಸರ್ಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ವ್ಯಾಟ್‌ ಅನ್ನು ತಲಾ 2 ರು.ವರೆಗೂ ಏರಿಸಿದೆ. ಹೀಗಾಗಿ ಈ ಎರಡು ರಾಜ್ಯಗಳಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ 4.50 ರು.ವರೆಗೂ ಏರಿಕೆಯಾಗಿದೆ

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್
ಮದ್ಯ ಮಾರಾಟಕ್ಕೆ ಇಳಿದ ಯುವರಾಜ್‌ ಸಿಂಗ್‌, ಒಂದು ತಿಂಗಳ ಸಂಬಳಕ್ಕೆ ಬರುತ್ತೆ ಒಂದು ಬಾಟಲ್‌!