Petrol Rate: ಪೆಟ್ರೋಲ್,ಡೀಸೆಲ್ ಬೆಲೆ ಸ್ಥಿರ, ನಾಳೆಯಿಂದ ಇಳಿಕೆ ನಿರೀಕ್ಷೆ!

By Suvarna NewsFirst Published Nov 30, 2021, 10:33 AM IST
Highlights

ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಬೆಲೆ (Rate) ಯಥಾಸ್ಥಿತಿ ಕಾಯ್ದುಕೊಂಡಿದೆ.ಆದ್ರೆ ತಜ್ಞರ ಪ್ರಕಾರ ಓಮಿಕ್ರಾನ್  (Omicron) ವೈರಸ್ ಹಿನ್ನೆಲೆಯಲ್ಲಿ ಜಗತ್ತಿನಾದ್ಯಂತ ನಿರ್ಬಂಧಗಳು ಹೆಚ್ಚುತ್ತಿರೋ ಕಾರಣ ಜಾಗತಿಕ ಮಟ್ಟದಲ್ಲಿ ಇಂಧನ ದರದಲ್ಲಿ ಇಳಿಕೆಯಾಗಿದೆ. ಹೀಗಾಗಿ ನಾಳೆ (ಡಿ.1) ಬಿಡುಗಡೆಯಾಗೋ ಹೊಸ ದರ ಪಟ್ಟಿಯಲ್ಲಿ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಕಡಿತ ಮಾಡೋ ನಿರೀಕ್ಷೆಯಿದೆ.

ಬೆಂಗಳೂರು (ನ.30):  ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel)  ಬೆಲೆ (Rate)  ಇಂದು (ನ.30)  ಕೂಡ ಸ್ಥಿರವಾಗಿದೆ. ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲದಿರೋದು ಸ್ವಲ್ಪ ಮಟ್ಟಿಗೆ ನೆಮ್ಮದಿ ತರಿಸಿದೆ. ಈ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗೆ ಸಂಬಂಧಿಸಿ ಮತ್ತೊಂದು ಸಂತಸದ ಸುದ್ದಿ ವರದಿಯಾಗಿದೆ. ಕೊರೋನಾ(Coronavirus) ಹೊಸ ರೂಪಾಂತರಿ ಓಮಿಕ್ರಾನ್ (Omicron) ವೈರಸ್ (Virus) ಭೀತಿ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಅನೇಕ ರಾಷ್ಟ್ರಗಳು ನಿರ್ಬಂಧ ಹೆಚ್ಚಿಸುತ್ತಿರೋ ಕಾರಣ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗೋ ನಿರೀಕ್ಷೆಯಿದೆ. ನಾಳೆ (ಡಿಸೆಂಬರ್ 1) ಬಿಡುಗಡೆಯಾಗೋ ಹೊಸ ದರದಲ್ಲಿ ಪೆಟ್ರೋಲ್  ಹಾಗೂ ಡೀಸೆಲ್ ಬೆಲೆ ಲೀಟರ್ ಗೆ 5ರೂ. ತನಕ ಕಡಿತವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಹೊಸ ರೂಪಾಂತರಿ ಕಾರಣಕ್ಕೆ ವಿಮಾನ ಸೇವೆಗಳ ಮೇಲೆ ಮತ್ತೆ ನಿರ್ಬಂಧ ವಿಧಿಸಲಾಗುತ್ತಿದೆ. ಕೆಲವು ಕಡೆ ಲಾಕ್ ಡೌನ್ ಹೇರಲಾಗುತ್ತಿದೆ. ಪರಿಣಾಮ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ ಶೇ.12ರಷ್ಟು ಕುಸಿತ ಕಂಡಿದ್ದು, 72ಡಾಲರ್ ಗೆ ತಲುಪಿದೆ.    ಹಾಗಾಗಿ ನಾಳೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾದ್ರೂ ಆಗಬಹುದು. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ(Cities) ಇಂದು (ನ.30)  ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? 

ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಕಳೆದ ಒಂದು ವಾರದಿಂದ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ (Mysore) ಪೆಟ್ರೋಲ್ ಗೆ 100.43 ರೂ. ಹಾಗೂ ಡೀಸೆಲ್ ಗೆ 84.87ರೂ. ಇದೆ. ಬಿಸಿಲ ನಗರಿ ಕಲಬುರಗಿಯಲ್ಲಿ (Kalburgi) ಪೆಟ್ರೋಲ್ ಗೆ 100.28 ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ. 

ಅಂದು ಹೋಟೆಲ್ ಮಾಣಿ, ಇಂದು ಲಕ್ಷುರಿ ಕಾರ್‌ಗಳ ಧಣಿ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

ಬೆಳ್ಳುಳ್ಳಿ ದರ ದಿಢೀರ್‌ ಕುಸಿತ, ಭಾರೀ ಕುಸಿತಕ್ಕೆ ರೈತರ ಆಕ್ರೋಶ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

click me!