Petrol Diesel Rate:ಎರಡೂವರೆ ತಿಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ಬೆಲೆ; ರಾಜ್ಯದಲ್ಲಿ ಇಂದಿನ ದರ ಹೀಗಿದೆ

Suvarna News   | Asianet News
Published : Jan 16, 2022, 11:51 AM IST
Petrol Diesel Rate:ಎರಡೂವರೆ ತಿಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ಬೆಲೆ; ರಾಜ್ಯದಲ್ಲಿ ಇಂದಿನ ದರ ಹೀಗಿದೆ

ಸಾರಾಂಶ

ಭಾನುವಾರ ವೀಕೆಂಡ್ ಕರ್ಫ್ಯೂ ಕಾರಣಕ್ಕೆ ವಾಹನಗಳ ಓಡಾಟಕ್ಕೆ ಬ್ರೇಕ್ ಬಿದ್ದಿದೆ.ಇದ್ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೇಡಿಕೆ ತಗ್ಗಿದೆ.ಆದ್ರೆ ಬೆಲೆಯಲ್ಲಿ ಮಾತ್ರ ಇಂದು (ಜ.16) ಕೂಡ ಯಾವುದೇ ಬದಲಾವಣೆಯಾಗಿಲ್ಲ. 

ಬೆಂಗಳೂರು (ಜ.16): ಒಮಿಕ್ರಾನ್(Omicron),ಕೋವಿಡ್ -19(COVID-19)ಹೆಚ್ಚಳದ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಏರಿಳಿತ ಕಂಡುಬರುತ್ತಿದೆ. ಆದ್ರೆ ದೆಹಲಿ (Delhi) ಹಾಗೂ ಜಾರ್ಖಂಡ್ ( Jharkhand) ರಾಜ್ಯಗಳನ್ನು ಹೊರತುಪಡಿಸಿದ್ರೆ ದೇಶದಲ್ಲಿ ನವೆಂಬರ್ 4ರ ಬಳಿಕ ಇಂಧನ (Fuel) ದರದಲ್ಲಿ (Price) ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯದಲ್ಲಿ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಕಾರಣಕ್ಕೆ ಜನರ ಓಡಾಟಕ್ಕೆ ಬ್ರೇಕ್ ಬಿದ್ದಿದೆ. ಇಂದು (ಜ.16) ಭಾನುವಾರವಾದ ಕಾರಣ ವೀಕೆಂಡ್ ಕರ್ಫ್ಯೂ ಕಾರಣಕ್ಕೆ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel)ಬೇಡಿಕೆ ತಗ್ಗಿದೆ.ಆದ್ರೆ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆಯಾಗಿಲ್ಲ.ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.16) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
*ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. 
*ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. 
*ಮಂಗಳೂರಿನಲ್ಲಿ(Mangalore)ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 
*ಮೈಸೂರಿನಲ್ಲಿ(Mysore) ಪೆಟ್ರೋಲ್ ದರ ಲೀಟರ್ ಗೆ  100.08ರೂ.ಇದೆ.  ಡೀಸೆಲ್ ದರ ಇಂದು ಲೀಟರ್ ಗೆ  84. 56ರೂ. ಇದೆ. 
*ಕಲಬುರಗಿಯಲ್ಲಿ(Kalburgi)ಪೆಟ್ರೋಲ್  ದರ ಲೀಟರ್ ಗೆ 101.04ರೂ. ಹಾಗೂ ಡೀಸೆಲ್ ಗೆ 85.45ರೂ. ಇದೆ. 

Business Ideas : 2022ರಲ್ಲಿ ಅತಿ ಹೆಚ್ಚು ಲಾಭ ತಂದುಕೊಡಲಿದೆ ಈ ಬ್ಯುಸಿನೆಸ್!

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Covid-19 : ಡೋಲೋ ಇದ್ರೆ ಚಿಂತೆಯ ಮಾತೆಲ್ಲಿ, ಕೋವಿಡ್ ಟೈಮ್ ಅಲ್ಲಿ ಕಂಪನಿಗೆ ಆದ ಲಾಭ ಇಷ್ಟು!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

Read more Articles on
click me!

Recommended Stories

One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್
ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!