
ಹೈದರಾಬಾದ್(ಸೆ.4): ನೋಡ್ತಾ ಇರಿ ಶೀಘ್ರದಲ್ಲೇ ಪೆಟ್ರೋಲ್ ಬೆಲೆ ಲೀಟರ್ ಗೆ ನೂರು ರೂ. ಆಗುತ್ತೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿರುವ ನಾಯ್ಡು, ದೇಶದ ಅರ್ಥ ವ್ಯವಸ್ಥೆ ತೀರ ಹದಗೆಡುತ್ತಿದ್ದು, ನಾವು ಎತ್ತ ಸಾಗುತ್ತಿದ್ದೇವೆ ಎಂಬ ಆತಂಕ ಎದುರಾಗಿದೆ ಎಂದು ಹೇಳಿದ್ದಾರೆ.
ಡಾಲರ್ ಎದುರು ರೂಪಾಯಿ ಮೌಲ್ಯ ನಿರಂತರ ಕುಸಿತ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರ ಏರಿಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ. ಆದರೂ ಅಚ್ಚರಿಪಡಬೇಕಿಲ್ಲ ಎಂದು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ದೇಶದ ಅರ್ಥ ವ್ಯವಸ್ಥೆ ಪಾತಾಳಕ್ಕೆ ಕುಸಿದಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಸಮರ್ಪಕ ಆರ್ಥಿಕ ನೀತಿಗಳೇ ಕಾರಣ ಎಂದು ನಾಯ್ಡು ಆರೋಪಿಸಿದ್ದಾರೆ.
2014ರ ಲೋಕಸಭೆ ಚುನಾವಣೆ ಬಳಿಕ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಭಾಗವಾಗಿದ್ದ ಚಂದ್ರಬಾಬು ನಾಯ್ಡು ನೇತೃತ್ವದ ಟಿಇಡಿಪಿ, ಆಂಧ್ರಕ್ಕೆ ವಿಶೇಷ ಸ್ಥಾನಮಾನ ವಿಷಯದಲ್ಲಿ ಮನಸ್ತಾಪದ ಹಿನ್ನೆಯಲ್ಲಿ ಇತ್ತೀಚಿಗಷ್ಟೇ ಮೈತ್ರಿಕೂಟದಿಂದ ಹೊರ ಬಿದ್ದಿತ್ತು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.