ರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ ಯೋಜನೆ 12ನೇ ಕಂತಿನ ಹಣ ಈ ತಿಂಗಳು ಖಾತೆಗೆ ಬರುವ ನಿರೀಕ್ಷೆ

By Suvarna NewsFirst Published Sep 24, 2022, 6:40 PM IST
Highlights

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12ನೇ ಕಂತಿನ ಹಣ ಈ ತಿಂಗಳ ಅಂತ್ಯದೊಳಗೆ ರೈತರ ಖಾತೆ ಸೇರುವ ನಿರೀಕ್ಷೆಯಿದೆ. ಹೀಗಾಗಿ ರೈತರು ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯಾ ಎಂಬುದನ್ನು ಪರಿಶೀಲಿಸೋದು ಅಗತ್ಯ. ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಅಥವಾ ಆನ್ ಲೈನ್ ಮೂಲಕ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಬಹುದು.
 

ನವದೆಹಲಿ (ಸೆ.24):  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಯೋಜನೆ) 12ನೇ ಕಂತಿನ ಹಣವನ್ನು ಈ ತಿಂಗಳ ಅಂತ್ಯದೊಳಗೆ ಕೇಂದ್ರ ಸರ್ಕಾರ ರೈತರ ಖಾತೆಗಳಿಗೆ ಜಮೆ ಮಾಡುವ  ನಿರೀಕ್ಷೆಯಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದ ನಾಲ್ಕು ತಿಂಗಳಿಗೊಮ್ಮೆ ಸಿಗುವ ಸಹಾಯಧನದ ನಿರೀಕ್ಷೆಯಲ್ಲಿ ಕುಳಿತಿರುವ ರೈತರ ಕೈಗೆ ಶೀಘ್ರದಲ್ಲೇ 2000ರೂ. ಸೇರಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 31ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 10 ಕೋಟಿಗಿಂತಲೂ ಹೆಚ್ಚು ರೈತರಿಗೆ ವಿತರಿಸಿದ್ದರು. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಆಯಾ ಗ್ರಾಮಗಳ ಗ್ರಾಮ ಪಂಚಾಯತ್ ಗಳ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗುತ್ತದೆ. ಹೀಗಾಗಿ ಈ ಯೋಜನೆಯ ಪ್ರಯೋಜನ ಪಡೆಯುವ ರೈತ ಕುಟುಂಬಗಳು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪರಿಶೀಲಿಸಬಹುದು. ಇಲ್ಲವೆ ಆನ್ ಲೈನ್ ನಲ್ಲಿ ಕೂಡ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಬಹುದು. ಇನ್ನು ರಾಜ್ಯ ಸರ್ಕಾರಗಳು ಕೂಡ ಅರ್ಹ ರೈತರಿಗೆ ಖಾತೆಗೆ ಹಣ ಜಮೆಯಾದ ಬಗ್ಗೆ ಎಸ್ ಎಂಎಸ್ ಅಲರ್ಟ್ ಕಳುಹಿಸುತ್ತವೆ. 

ಆನ್ ಲೈನ್ ನಲ್ಲಿ ಪರಿಶೀಲಿಸೋದು ಹೇಗೆ?
ಹಂತ 1: ಪಿಎಂ ಕಿಸಾನ್ ಸಮ್ಮಾನ್ ನಿಧಿಯ ವೆಬ್‌ಸೈಟ್ pmkisan.gov.inಗೆ ಭೇಟಿ ನೀಡಿ.
ಹಂತ 2: ಮುಖಪುಟದಿಂದ ನಿಮಗೆ ರೈತರ ಕಾರ್ನರ್ (Farmers Corner) ಎಂಬ ಪ್ರತ್ಯೇಕ ವಿಭಾಗ ಕಾಣಿಸುತ್ತದೆ.
ಹಂತ 3: ರೈತರ ಕಾರ್ನರ್ ವಿಭಾಗದಲ್ಲಿ 'ಫಲಾನುಭವಿ ಸ್ಥಿತಿ' (Beneficiary Status) ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.

US Recession ಭೀತಿ: 80 ಡಾಲರ್‌ಗಿಂತ ಕಡಿಮೆಗೆ ಕುಸಿದ Crude Oil; ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಯಾವಾಗ..?

ಹಂತ 4: ಇಲ್ಲವೇ ನೀವು ನೇರವಾಗಿ https://pmkisan.gov.in/BeneficiaryStatus.aspx ಲಿಂಕ್ ಗೆ ಭೇಟಿ ನೀಡಬಹುದು.
ಹಂತ 5: ಈಗ ನೀವು ಆಧಾರ್ ಸಂಖ್ಯೆ, ಪಿಎಂ ಕಿಸಾನ್ ಖಾತೆ ಸಂಖ್ಯೆ ಅಥವಾ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ -ಇವುಗಳಲ್ಲಿ ಯಾವುದಾದರೂ ಒಂದು ಮಾಹಿತಿಯನ್ನು ಆಯ್ಕೆ ಮಾಡಿ ಭರ್ತಿ ಮಾಡಿ.
ಹಂತ 6: ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ  'ಡೇಟಾ ಪಡೆಯಿರಿ' (Data option) ಆಯ್ಕೆ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಫಲಾನುಭವಿ ಸ್ಥಿತಿ ಬಗ್ಗೆ ಮಾಹಿತಿ ಸಿಗುತ್ತದೆ.

ನೀವು ಪಿಎಂ ಕಿಸಾನ್ ಯೋಜನೆ ಪ್ರಯೋಜನ ಪಡೆಯಲು ಅರ್ಹರಾಗಿದ್ದು, ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ್ದರು ಕೂಡ ಒಂದು ವೇಳೆ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಸರ್ಕಾರಕ್ಕೆ ನೇರವಾಗಿ ದೂರು ನೀಡಬಹುದು.

ಆನ್ ಲೈನ್ ಪಾವತಿಗೆ ಅ.1ರಿಂದ ಹೊಸ ನಿಯಮ; ಡೆಬಿಟ್, ಕ್ರೆಡಿಟ್ ಕಾರ್ಡ್ ಟೋಕನೈಸ್ ಮಾಡೋದು ಹೇಗೆ?

1.80 ಲಕ್ಷ ಕೋಟಿ ಖರ್ಚು
ಪಿಎಂ ಕಿಸಾನ್ ಯೋಜನೆಗೆ 2022ನೇ ಆರ್ಥಿಕ ಸಾಲಿನಲ್ಲಿ ಕೇಂದ್ರ ಸರ್ಕಾರ ಈ ತನಕ 1.80ಲಕ್ಷ ಕೋಟಿ ರೂ. ಖರ್ಚು ಮಾಡಿದೆ. ಪಿಎಂ ಕಿಸಾನ್ ಯೋಜನೆ ರೈತರಿಗೆ ಪಿಂಚಣಿ ನೀಡುವ ಯೋಜನೆಯಾಗಿದೆ.  ಈ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು.ಈ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್‌ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (SMFs) ಉದ್ದೇಶಿಸಲಾಗಿತ್ತು, ಆದರೆ 01.06.2019 ರಿಂದ ಜಾರಿಗೆ ಬರುವಂತೆ, ಎಲ್ಲ ಭೂಹಿಡುವಳಿ ರೈತರನ್ನು ಒಳಗೊಳ್ಳಲು ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಯಿತು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮುಖಾಂತರ ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6000ರೂ. ಆರ್ಥಿಕ ಸಹಾಯ ನೀಡುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ (Farmers) ಖಾತೆಗೆ 2000ರೂ. ಅನ್ನು ಸರ್ಕಾರ ಜಮೆ ಮಾಡುತ್ತದೆ. 

 

click me!