ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಹಣ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ಜಮೆ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆದರೆ, ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಹೊಸ ವರ್ಷದಲ್ಲಿ ಯೋಜನೆಯ ಹಣವನ್ನು ಸರ್ಕಾರ ಫಲಾನುಭವಿಗಳ ಖಾತೆಗೆ ಜಮೆ ಮಾಡುವ ನಿರೀಕ್ಷೆಯಿದೆ.
ನವದೆಹಲಿ (ಡಿ.27): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್ ಯೋಜನೆ) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಹೊಸ ವರ್ಷಕ್ಕೆ ಗಿಫ್ಟ್ ನೀಡಲಿದೆ. ಈ ಯೋಜನೆಯ 13ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ ಹೊಸ ವರ್ಷದಲ್ಲಿ ರೈತರ ಖಾತೆಗಳಿಗೆ ಜಮೆ ಮಾಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 13ನೇ ಕಂತಿನ ಹಣ ಡಿಸೆಂಬರ್ 20ರಿಂದ 26ರ ನಡುವೆ ಫಲಾನುಭವಿಗಳ ಖಾತೆಗೆ ಜಮೆ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು. ಆದರೆ, ಎಬಿಪಿ ನ್ಯೂಸ್ ವರದಿ ಪ್ರಕಾರ 13ನೇ ಕಂತಿನ ಹಣ ಫೆಬ್ರವರಿ -ಮಾರ್ಚ್ ಮಧ್ಯೆ ವರ್ಗಾವಣೆಯಾಗಬಹುದು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತರಿಗೆ ಪ್ರತಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ 2,000 ರೂ. ಗಳಂತೆ ಒಟ್ಟು 6 ಸಾವಿರ ರೂ. ಅನ್ನು ನೀಡಲಾಗುತ್ತದೆ. ಫಲಾನುಭವಿಗಳಿಗಳ ಬ್ಯಾಂಕ್ ಅಕೌಂಟ್‌ಗಳಿಗೆ ನೇರವಾಗಿ ಇದನ್ನು ವರ್ಗಾಯಿಸಲಾಗುತ್ತದೆ.
ಆನ್ ಲೈನ್ ನಲ್ಲಿ ಪರಿಶೀಲಿಸೋದು ಹೇಗೆ?
ಹಂತ 1: ಪಿಎಂ ಕಿಸಾನ್ ಸಮ್ಮಾನ್ ನಿಧಿಯ ವೆಬ್‌ಸೈಟ್ pmkisan.gov.inಗೆ ಭೇಟಿ ನೀಡಿ.
ಹಂತ 2: ಮುಖಪುಟದಿಂದ ನಿಮಗೆ ರೈತರ ಕಾರ್ನರ್ (Farmers Corner) ಎಂಬ ಪ್ರತ್ಯೇಕ ವಿಭಾಗ ಕಾಣಿಸುತ್ತದೆ.
ಹಂತ 3: ರೈತರ ಕಾರ್ನರ್ ವಿಭಾಗದಲ್ಲಿ 'ಫಲಾನುಭವಿ ಸ್ಥಿತಿ' (Beneficiary Status) ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಇಲ್ಲವೇ ನೀವು ನೇರವಾಗಿ https://pmkisan.gov.in/BeneficiaryStatus.aspx ಲಿಂಕ್ ಗೆ ಭೇಟಿ ನೀಡಬಹುದು.
ಹಂತ 5: ಈಗ ನೀವು ಆಧಾರ್ ಸಂಖ್ಯೆ, ಪಿಎಂ ಕಿಸಾನ್ ಖಾತೆ ಸಂಖ್ಯೆ ಅಥವಾ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ -ಇವುಗಳಲ್ಲಿ ಯಾವುದಾದರೂ ಒಂದು ಮಾಹಿತಿಯನ್ನು ಆಯ್ಕೆ ಮಾಡಿ ಭರ್ತಿ ಮಾಡಿ.
ಹಂತ 6: ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ 'ಡೇಟಾ ಪಡೆಯಿರಿ' (Data option) ಆಯ್ಕೆ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಫಲಾನುಭವಿ ಸ್ಥಿತಿ ಬಗ್ಗೆ ಮಾಹಿತಿ ಸಿಗುತ್ತದೆ.
ಒಬ್ಬ ವ್ಯಕ್ತಿ ಎರಡು ಪಿಪಿಎಫ್ ಖಾತೆ ಹೊಂದಬಹುದಾ? ನಿಯಮ ಏನ್ ಹೇಳುತ್ತೆ?
ಫೆಬ್ರವರಿ 2019 ರಲ್ಲಿ ಮೋದಿ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಆರಂಭಿಸಲಾಯಿತು. ಈ ಯೋಜನೆಯು ಆರಂಭದಲ್ಲಿ 2 ಹೆಕ್ಟೇರ್‌ವರೆಗೆ ಭೂಮಿಯನ್ನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ (SMFs) ಉದ್ದೇಶಿಸಲಾಗಿತ್ತು. ಆದರೆ 01.06.2019 ರಿಂದ ಜಾರಿಗೆ ಬರುವಂತೆ, ಎಲ್ಲ ಭೂಹಿಡುವಳಿ ರೈತರನ್ನು ಒಳಗೊಳ್ಳಲು ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸಲಾಯಿತು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮುಖಾಂತರ ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6000ರೂ. ಆರ್ಥಿಕ ಸಹಾಯ ನೀಡುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ (Farmers) ಖಾತೆಗೆ 2000ರೂ. ಅನ್ನು ಸರ್ಕಾರ ಜಮೆ ಮಾಡುತ್ತದೆ.
ಬರೀ ಚಾಟ್ ಮಾಡಿ ಟೈಮ್ ವೇಸ್ಟ್ ಮಾಡ್ಬೇಡಿ, ವಾಟ್ಸ್ ಆ್ಯಪ್‌ನಿಂದ ಗಳಿಸಬಹುದು ಹಣ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಆಯಾ ಗ್ರಾಮಗಳ ಗ್ರಾಮ ಪಂಚಾಯತ್ ಗಳ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗುತ್ತದೆ. ಹೀಗಾಗಿ ಈ ಯೋಜನೆಯ ಪ್ರಯೋಜನ ಪಡೆಯುವ ರೈತ ಕುಟುಂಬಗಳು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಪರಿಶೀಲಿಸಬಹುದು. ಇಲ್ಲವೆ ಆನ್ ಲೈನ್ ನಲ್ಲಿ ಕೂಡ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಬಹುದು. ಇನ್ನು ರಾಜ್ಯ ಸರ್ಕಾರಗಳು ಕೂಡ ಅರ್ಹ ರೈತರಿಗೆ ಖಾತೆಗೆ ಹಣ ಜಮೆಯಾದ ಬಗ್ಗೆ ಎಸ್ ಎಂಎಸ್ ಅಲರ್ಟ್ ಕಳುಹಿಸುತ್ತವೆ.