*ಪಿಎಂ ಕಿಸಾನ್ ಯೋಜನೆ ಇ-ಕೆವೈಸಿ ಪೂರ್ಣಗೊಳಿಸಲು ಈ ಹಿಂದೆ ಮೇ 31ರ ಗಡುವು
*ಮೊಬೈಲ್ ನಲ್ಲಿ ಕೂಡ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ
*ಮೇ 31ರಂದು ಬಿಡುಗಡೆಯಾಗಿದೆ 11ನೇ ಕಂತಿನ ಹಣ
ನವದೆಹಲಿ (ಜೂ.4): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Pradhan Mantri Kisan Samman Nidhi) ಅಥವಾ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಸಹಾಯಧನ ಪಡೆಯುತ್ತಿರುವ ರೈತರಿಗೆ (Farmers) ಇ-ಕೆವೈಸಿ (eKYC) ಪೂರ್ಣಗೊಳಿಸಲು ನೀಡಿದ್ದ ಅಂತಿಮ ಗಡುವನ್ನು (Deadline) ಕೇಂದ್ರ ಸರ್ಕಾರ ಮತ್ತೆ ಮುಂದೂಡಿದೆ. ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಮೇ 31 ಅಂತಿಮ ಗಡುವಾಗಿತ್ತು. ಈಗ ಜುಲೈ 31, 2022ಕ್ಕೆ ಮುಂದೂಡಲಾಗಿದೆ.
ಈ ಬಗ್ಗೆ ಪಿಎಂ ಕಿಸಾನ್ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ. 'ಪಿಎಂ ಕಿಸಾನ್ ಯೋಜನೆಯ ಎಲ್ಲ ಫಲಾನುಭವಿಗಳಿಗೆ ಇ-ಕೆವೈಸಿ ಪೂರ್ಣಗೊಳಿಸುವ ಅಂತಿಮ ಗಡುವನ್ನು 2022ರ ಜುಲೈ 31ರ ತನಕ ವಿಸ್ತರಿಸಲಾಗಿದೆ' ಎಂದು ಪಿಎಂ ಕಿಸಾನ್ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 31ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 10 ಕೋಟಿಗಿಂತಲೂ ಹೆಚ್ಚು ರೈತರಿಗೆ ವಿತರಿಸಿದ್ದರು.
PM Kisan: ರೈತರಿಗೆ ಶುಭ ಸಮಾಚಾರ; ನಾಳೆ ಖಾತೆಗೆ ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ?
ಇ-ಕೆವೈಸಿ ಪೂರ್ಣಗೊಳಿಸೋದು ಎಲ್ಲಿ?
ಮೊಬೈಲ್ ನಲ್ಲಿ ಕೂಡ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಆದರೆ, ಬಹುತೇಕ ರೈತರು ಆಂಡ್ರಾಯ್ಡ್ ಮೊಬೈಲ್ ಹೊಂದಿರದ ಕಾರಣ ಈ ಪ್ರಕ್ರಿಯೆ ಪೂರ್ಣಗೊಳಿಸಲು ಕಷ್ಟವಾಗುತ್ತಿದೆ. ಇಂಥ ರೈತರಿಗೆ ನೆರವಾಗಲೆಂದು 'ಗ್ರಾಮ್ ಒನ್ ಸೇವಾ ಕೇಂದ್ರಗಳ' ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ಸಂಖ್ಯೆ ನಮೂದಿಸದಿರುವುದು ಅಥವಾ ತಪ್ಪು ಮೊಬೈಲ್ ಸಂಖ್ಯೆ ನಮೂದಾಗಿದ್ದರೆ ಅಂಥವರು ಬಯೋಮೆಟ್ರಿಕ್ ಮೂಲಕ ಇ-ಕೆವೈಸಿ ಪೂರ್ಣಗೊಳಿಸಲು ಗ್ರಾಮ್ ಒನ್ ಸೇವಾ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇನ್ನು ಸೈಬರ್ ಗಳಲ್ಲಿ ಕೂಡ ಇ-ಕೆವೈಸಿ ಪೂರ್ಣಗೊಳಿಸಬಹುದು.
ಇ-ಕೆವೈಸಿ ಪೂರ್ಣಗೊಳಿಸೋದು ಹೇಗೆ?
-ಮೊದಲಿಗೆ ಪಿಎಂ ಕಿಸಾನ್ ಅಧಿಕೃತ ವೆಬ್ ಸೈಟ್ https://pmkisan.gov.in ಭೇಟಿ ನೀಡಿ.
-ಈಗ ಬಲ ಭಾಗದಲ್ಲಿ ಹೋಮ್ ಪೇಜ್ ಕೆಳಗೆ ನಿಮಗೆ ಫಾರ್ಮರ್ಸ್ ಕಾರ್ನರ್ ಕಾಣಿಸುತ್ತದೆ.
-ಫಾರ್ಮರ್ಸ್ ಕಾರ್ನರ್ ಕೆಳಗೆ ಒಂದು ಬಾಕ್ಸ್ ಇದ್ದು, ಅದ್ರಲ್ಲಿ ಇ-ಕೆವೈಸಿ ಎಂದಿದೆ.
-ಈಗ ಇ-ಕೆವೈಸಿ ಮೇಲೆ ಕ್ಲಿಕ್ ಮಾಡಿ.
-ಒಂದು ಪುಟ ತೆರೆದುಕೊಳ್ಳುತ್ತದೆ. ಅದ್ರಲ್ಲಿ ಆಧಾರ್ ಇ-ಕೆವೈಸಿ ಭರ್ತಿ ಮಾಡಬಹುದು.
-ಈಗ ನೀವು ಆಧಾರ್ ಸಂಖ್ಯೆ ಹಾಗೂ ಕಾಪ್ಚ ಕೋಡ್ ನಮೂದಿಸಬೇಕು. ಆ ಬಳಿಕ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಿ.
-ಆ ಬಳಿಕ ನೀವು ಆಧಾರ್ ಸಂಖ್ಯೆಗೆ ಲಿಂಕ್ ಆಗಿರೋ ನಿಮ್ಮ ಮೊಬೈಲ್ ಸಂಖ್ಯೆ ನಮೂದಿಸಬೇಕು. ಆ ಬಳಿಕ OTP ಬಟನ್ ಮೇಲೆ ಕ್ಲಿಕ್ ಮಾಡಬೇಕು.
-ಈಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ.
-OTP ನೋಂದಾಯಿಸಿ ಸಬ್ಮಿಟ್ ಮಾಡಲು Authentication button ಮೇಲೆ ಕ್ಲಿಕ್ ಮಾಡಿ.
- Submit ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ e-KYC ಪೂರ್ಣಗೊಳ್ಳುತ್ತದೆ.
Steel Price Fall:ಮನೆ ಕಟ್ಟುತ್ತಿರೋರಿಗೆ ಶುಭ ಸುದ್ದಿ; ಉಕ್ಕಿನ ಬೆಲೆ ಪ್ರತಿ ಟನ್ ಗೆ 5,500 ರೂ. ಇಳಿಕೆ
11ನೇ ಕಂತಿನ ಹಣ ಬಂದಿದೆಯಾ ಎಂದು ಪರಿಶೀಲಿಸೋದು ಹೇಗೆ?
ಹಂತ 1: ಪಿಎಂ ಕಿಸಾನ್ ಸಮ್ಮಾನ್ ನಿಧಿಯ ವೆಬ್‌ಸೈಟ್ pmkisan.gov.inಗೆ ಭೇಟಿ ನೀಡಿ.
ಹಂತ 2: ಮುಖಪುಟದಿಂದ ನಿಮಗೆ ರೈತರ ಕಾರ್ನರ್ (Farmers Corner) ಎಂಬ ಪ್ರತ್ಯೇಕ ವಿಭಾಗ ಕಾಣಿಸುತ್ತದೆ.
ಹಂತ 3: ರೈತರ ಕಾರ್ನರ್ ವಿಭಾಗದಲ್ಲಿ 'ಫಲಾನುಭವಿ ಸ್ಥಿತಿ' (Beneficiary Status) ಎಂಬ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಈಗ ನೀವು ಆಧಾರ್ ಸಂಖ್ಯೆ, ಪಿಎಂ ಕಿಸಾನ್ ಖಾತೆ ಸಂಖ್ಯೆ ಅಥವಾ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ -ಇವುಗಳಲ್ಲಿ ಯಾವುದಾದರೂ ಒಂದು ಮಾಹಿತಿಯನ್ನು ಆಯ್ಕೆ ಮಾಡಿ ಭರ್ತಿ ಮಾಡಿ.
ಹಂತ 6: ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ 'ಡೇಟಾ ಪಡೆಯಿರಿ' (Data option) ಆಯ್ಕೆ ಮೇಲೆ ಕ್ಲಿಕ್ ಮಾಡಿ. ಈಗ ನಿಮಗೆ ಫಲಾನುಭವಿ ಸ್ಥಿತಿ ಬಗ್ಗೆ ಮಾಹಿತಿ ಸಿಗುತ್ತದೆ.