ರೈತರಿಗೆ ಗುಡ್ ನ್ಯೂಸ್;ಪಿಎಂ ಕಿಸಾನ್ ಯೋಜನೆ ಮೊತ್ತ 6,000 ರೂ.ನಿಂದ 8,000ರೂ.ಗೆ ಏರಿಕೆ ಸಾಧ್ಯತೆ

By Suvarna News  |  First Published Jan 8, 2024, 4:20 PM IST

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ  ಯೋಜನೆ ಅಡಿಯಲ್ಲಿರೈತರಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು ಕೇಂದ್ರ ಸರ್ಕಾರ 6,000 ರೂ.ನಿಂದ 8,000ರೂ.ಗೆ ಏರಿಕೆ ಮಾಡಿದೆ. 


ನವದೆಹಲಿ (ಜ.8): ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆ ಅಡಿಯಲ್ಲಿ ರೈತರಿಗೆ ನೀಡುತ್ತಿರುವ ಸಹಾಯಧನದ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ವರದಿಯಾಗಿದೆ. ಇದರ ಅನ್ವಯ ರೈತರಿಗೆ ನೀಡಲಾಗುತ್ತಿರುವ ಸಹಾಯಧನದ ಮೊತ್ತ ವಾರ್ಷಿಕ 6,000 ರೂ.ನಿಂದ 8,000ರೂ.ಗೆ ಏರಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಸರ್ಕಾರ ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳನ್ನು ಕೂಡ ಹೆಚ್ಚಿಸಲು ಯೋಚಿಸುತ್ತಿದೆ. ಈ ಕುರಿತ ಅಂತಿಮ ನಿರ್ಧಾರವನ್ನು ಶೀಘ್ರದಲ್ಲೇ ಸರ್ಕಾರ ಕೈಗೊಳ್ಳಲಿವೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ. ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ರೈತರಿಗೆ ಸರ್ಕಾರ ಹಣಕಾಸಿನ ನೆರವು ನೀಡುತ್ತದೆ. ಇನ್ನು ಪಿಎಂ ಗರೀಬಿ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 5ಕೆಜಿ ಆಹಾರ ಧಾನ್ಯಗಳನ್ನು ಒದಗಿಸುತ್ತದೆ. 

ಪಿಎಂ ಕಿಸಾನ್ ಯೋಜನೆಯ 16ನೇ ಕಂತಿನ ಹಣ 2024ರ ಫೆಬ್ರವರಿ ಹಾಗೂ 2024ರ ಮಾರ್ಚ್ ನಡುವೆ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಈ ಬಗ್ಗೆ ಸರ್ಕಾರ ಇಲ್ಲಿಯ ತನಕ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಇನ್ನು ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣವನ್ನು ಕೇಂದ್ರ ಸರ್ಕಾರ 2023ರ ನವೆಂಬರ್ 15ರಂದು ಬಿಡುಗಡೆ ಮಾಡಿತ್ತು. ಈ ಯೋಜನೆಯಡಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. 

Tap to resize

Latest Videos

ಹೊಸ ವರ್ಷಕ್ಕೆ ಎಫ್‌ಡಿ ಇಡಲು ಬಯಸ್ತಿದ್ದೀರಾ? ಹಾಗಾದ್ರೆ ಪ್ರಮುಖ ಬ್ಯಾಂಕ್‌ಗಳು ಎಷ್ಟು ಬಡ್ಡಿ ದರ ನೀಡ್ತಿವೆ ನೋಡಿ..

ಕೇಂದ್ರ ಸರ್ಕಾರವು ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಖರೀದಿ ಸೇರಿದಂತೆ ಆರ್ಥಿಕವಾಗಿ ನೆರವಾಗುವ ದೃಷ್ಟಿಯಿಂದ 2019ರಲ್ಲಿ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು ಜಾರಿಗೆ ತಂದಿತ್ತು. ಇದರಡಿಯಲ್ಲಿ ಅರ್ಹ ರೈತರು ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂ.ನಂತೆ ವಾರ್ಷಿಕ ಒಟ್ಟು 6000 ರೂ.ಪಡೆಯುತ್ತಾರೆ.ಭೂಮಿಯನ್ನು ಹೊಂದಿರುವ ಎಲ್ಲ ರೈತರು ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಪಡೆಯಲು ಅರ್ಹತೆ ಹೊಂದಿದ್ದಾರೆ. 

ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಸೇರ್ಪಡೆಗೊಳ್ಳೋದು ಹೇಗೆ?
- ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ ಸೈಟ್ www.pmkisan.gov.in. ಭೇಟಿ ನೀಡಿ.
-ಮುಖಪುಟದಲ್ಲಿ ಕಾಣಿಸೋ 'Farmers Corner'ಎಂಬ ಆಯ್ಕೆ ಮೇಲೆ ಕ್ಲಿಕಿಸಿ.
-ಈಗ 'New Farmer Registration'ಮೇಲೆ ಕ್ಲಿಕ್ ಮಾಡಿ.
-ಈಗ ನೋಂದಣಿ ಅರ್ಜಿ ತೆರೆದುಕೊಳ್ಳುತ್ತದೆ. ಇದ್ರಲ್ಲಿ ಕೇಳಿರೋ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
-ಬಳಿಕ submit ಆಯ್ಕೆ ಮೇಲೆ ಕ್ಲಿಕ್ ಮಾಡಿ. 

Investment Tips: ಸಣ್ಣ ಷೇರಿನಲ್ಲಿ ಹೆಚ್ಚು ಲಾಭಬೇಕೆಂದ್ರೆ ಈ ರೂಲ್ಸ್ ಫಾಲೋ ಮಾಡಿ

ಈ ರೈತರಿಗೆ ಪ್ರಯೋಜನ ಸಿಗಲ್ಲ
-ಒಂದು ಕುಟುಂಬದ ಯಾವುದೇ ಸದಸ್ಯ ಆದಾಯ ತೆರಿಗೆ ಪಾವತಿಸುತ್ತಿದ್ರೆ ಅಂಥ ಕುಟುಂಬದ ರೈತನಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಯಾಗಲು ಸಾಧ್ಯವಿಲ್ಲ.
-ಯಾರ ಬಳಿ ಕೃಷಿಯೋಗ್ಯ ಭೂಮಿಯಿಲ್ಲವೋ ಅಂಥವರು ಕೂಡ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ.
-ಒಂದು ವೇಳೆ ಕೃಷಿ ಭೂಮಿ ನಿಮ್ಮ ಹೆಸರಿನಲ್ಲಿ ಇಲ್ಲದಿದ್ರೆ ಅಂದ್ರೆ ನಿಮ್ಮ ತಾತಾ ಅಥವಾ ಅಪ್ಪನ ಹೆಸರಿನಲ್ಲಿದ್ರೆ ನೀವು ಈ ಯೋಜನೆ ವ್ಯಾಪ್ತಿಗೆ ಒಳಪಡೋದಿಲ್ಲ.
-ಒಂದು ವೇಳೆ ನೀವು ಕೃಷಿ ಭೂಮಿ ಹೊಂದಿದ್ದು, ಸರ್ಕಾರಿ ನೌಕರಿಯಲ್ಲಿದ್ರೆ ನಿಮಗೆ ಈ ಯೋಜನೆ ಲಾಭ ಸಿಗೋದಿಲ್ಲ.
-ನೋಂದಾಯಿತ ವೈದ್ಯ, ಇಂಜಿನಿಯರ್, ನ್ಯಾಯವಾದಿ ಹಾಗೂ ಸಿಎ ಅಂಥ ಹುದ್ದೆಯಲ್ಲಿರೋ ವ್ಯಕ್ತಿ ಹೆಸರಿನಲ್ಲಿ ಕೃಷಿ ಭೂಮಿ ಇದ್ದರೂ ಆತ ಈ ಯೋಜನೆ ಫಲಾನುಭವಿಯಾಗಲು ಸಾಧ್ಯವಿಲ್ಲ.
-ಯಾವುದೇ ರೈತನಿಗೆ ಮಾಸಿಕ 10 ಸಾವಿರ ರೂ. ಪಿಂಚಣಿ ದೊರೆಯುತ್ತಿದ್ರೆ, ಅಂಥವರು ಕೂಡ ಈ ಯೋಜನೆ ಫಲಾನುಭವಿಯಾಗಲು ಸಾಧ್ಯವಿಲ್ಲ.

ಬಜೆಟ್ ನಲ್ಲಿ ಹೆಚ್ಚುವರಿ ಬೆಂಬಲ ಸಿಗುವ ನಿರೀಕ್ಷೆ
2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆಯಲ್ಲಿ ಕೇಂದ್ರ ಸರ್ಕಾರ ಬಡವರು, ರೈತರು, ಯುವಜನತೆ ಹಾಗೂ ಮಹಿಳೆಯರಿಗೆ ಹೆಚ್ಚುವರಿ ಬೆಂಬಲ ನೀಡುವ ಸಾಧ್ಯತೆಯಿದೆ. ಕೆಲವು ಮೂಲಗಳ ಪ್ರಕಾರ ಕಿರು, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ಯಮಗಳಿಗೆ ಬಜೆಟ್ ನಲ್ಲಿ ಹಣಕಾಸಿನ ನೆರವನ್ನು ಸರ್ಕಾರ ನೀಡಲಿದೆ. 


 

click me!