
ನ್ಯೂಯಾರ್ಕ್(ಸೆ.25): ಭಾರತ ಹೂಡಿಕೆದಾರರ ಸ್ವರ್ಗವಾಗಿ ಮಾರ್ಪಡುತ್ತಿದ್ದು, ನಮ್ಮ ಸರ್ಕಾರ 4D ಗಳ ಸೂತ್ರದ ಮೇಲೆ ಹೂಡಿಕೆದಾರರನ್ನು ಆಕರ್ಷಿಸಲು ಸಜ್ಜಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಬ್ಲೂಮ್‌ಬರ್ಗ್ ಗ್ಲೋಬಲ್ ಬಿಸಿನೆಸ್ ಫೋರಂನಲ್ಲಿ ಹೂಡಿಕೆದಾರರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಡೆಮೋಕ್ರಸಿ(ಪ್ರಜಾಪ್ರಭುತ್ವ), ಡೆಮೋಗ್ರಫಿ(ಜನಸಂಖ್ಯೆ), ಡಿಮ್ಯಾಂಡ್(ಬೇಡಿಕೆ) ಹಾಗೂ ಡಿಸೀಸಿವನೆಸ್ (ನಿರ್ಣಾಯಕತ್ವ)ದ ಆಗರ ಎಂದು ಹೇಳಿದರು.
ಭಾರತದ ಆಧುನಿಕ ಮೂಲಸೌಕರ್ಯಗಳಿಗಾಗಿ ಸುಮಾರು 1.3 ಟ್ರಿಲಿಯನ್ ಡಾಲರ್ ಖರ್ಚು ಮಾಡಲು ಸರ್ಕಾರ ಸಿದ್ಧವಿದ್ದು, ದೇಶದ ಸಾಮಾಜಿಕ ಮೂಲಸೌಕರ್ಯಕ್ಕಾಗಿ ಲಕ್ಷ ಕೋಟಿ ರೂ. ವ್ಯಯಿಸಲಿದ್ದೇವೆ ಎಂದು ಮೋದಿ ಮಾಹಿತಿ ನೀಡಿದರು.
ಭಾರತದಲ್ಲಿ ಕಾರ್ಪೊರೇಟ್ ತೆರಿಗೆಯನ್ನು ಕಡಿಮೆ ಮಾಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಧಾನಿ ಹೂಡಿಕೆದಾರರಿಗೆ ಕರೆ ನೀಡಿದರು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.