
ನವದೆಹಲಿ(ಏ.16): ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಏರಿರುವ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ ಪ್ರಧಾನಮಂತ್ರಿ ಕಚೇರಿ ಮತ್ತು ನೀತಿ ಆಯೋಗಕ್ಕೆ ಹೊಸ ಟಾಸ್ಕ್ ನೀಡಿದ್ದಾರೆ.
ಲೋಕಸಭೆ ಚುನಾವಣೆಗಳು ಮುಗಿದು ಹೊಸ ಸರ್ಕಾರ ರಚನೆಯಾದ ಬಳಿಕ, ಮೊದಲ 100 ದಿನಗಳಲ್ಲಿ ಉದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕಾಗಿ ಹೊಸ ನೀತಿ ರೂಪಿಸುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.
ಈ ಕುರಿತು ಪ್ರಧಾನಿ ಕಚೇರಿ ಮತ್ತು ನೀತಿ ಆಯೋಗಕ್ಕೆ ಸ್ಪಷ್ಟ ಸೂಚನೆ ನೀಡಿರುವ ಪ್ರಧಾನಿ ಮೋದಿ, ಹೊಸ ಸರ್ಕಾರ 100 ದಿನಗಳಲ್ಲಿ ಉದ್ಯೋಗ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಸುಧಾರಣೆ ತರಬಲ್ಲ ಹೊಸ ನೀತಿ ರೂಪಿಸುವಂತೆ ಸೂಚನೆ ನೀಡಿದ್ದಾರೆ.
ಅಲ್ಲದೇ ಮುಂದಿನ 5 ವರ್ಷಗಳಲ್ಲಿ ಎರಡಂಕಿ ಜಿಡಿಪಿ ಅಭಿವೃದ್ಧಿ ಸಾಧಿಸಲು ಈಗಿನಿಂದಲೇ ತಯಾರಿ ನಡೆಸುವಂತೆ ಪ್ರಧಾನಿ ಮೋದಿ ನೀತಿ ಆಯೋಗಕ್ಕೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
2047ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಸೇರಬೇಕು ಎಂಬ ಆಶಯ ಹೊತ್ತ ಪ್ರಧಾನಿ ಮೋದಿ, ಮುಂದಿನ ಸರ್ಕಾರ ರಚನೆಗೂ ಮೊದಲೇ ಅದರ ಕಾರ್ಯವೈಖರಿಯನ್ನು ನಿರ್ಧರಿಸಿ ಅದಕ್ಕೆ ತಕ್ಕಂತೆ ಯೋಜನೆ ರೂಪಿಸಲು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.