ಚುನಾವಣಾ ದಿನಾಂಕ ಘೋಷಣೆ ಮೊದಲೇ ಬಂಪರ್, ಪೆಟ್ರೋಲ್ ಡೀಸೆಲ್ ಬೆಲೆ ಇಳಿಸಿದ ಕೇಂದ್ರ!

By Suvarna News  |  First Published Mar 14, 2024, 9:42 PM IST

ಲೋಕಸಭಾ ಚುನಾವಣಾ ಸಮೀಪಿಸುತ್ತಿದೆ. ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದೆ. ಪ್ರತಿ ಲೀಟರ್‌ಗೆ 2 ರೂಪಾಯಿ ಕಡಿತ ಮಾಡಿದೆ.
 


ನವದೆಹಲಿ(ಮಾ.14) ಲೋಕಸಭಾ ಚುನಾವಣಾ ಕಾವು ಜೋರಾಗುತ್ತಿದೆ. ಚುನಾವಣಾ ಆಯೋಗ ಮತದಾನ ದಿನಾಂಕ ಘೋಷಣೆ ಮಾಡಲು ಸಜ್ಜಾಗಿದೆ. ದಿನಾಂಕ ಘೋಷಣೆಯಾದ ದಿನದಿಂದಲೇ ನೀತಿ ಸಂಹಿತಿ ಜಾರಿಯಾಗಲಿದೆ. ಇದೀಗ ಚುನಾವಣಾ ದಿನಾಂಕ ಘೋಷಣೆಗೂ ಮೊದಲೇ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಇದೀಗ ಪೆಟ್ರೋಲ್ ಡೀಸೆಲ್ ಬೆಲೆಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಪ್ರತಿ ಲೀಟರ್ ಮೇಲೆ 2 ರೂಪಾಯಿ ಕಡಿತ ಮಾಡಲಾಗಿದೆ. ಪರಿಷ್ಕೃತ ದರ ನಾಳೆ(ಮಾ.15) ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.

ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ. ಇತ್ತೀಚೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿತ್ತು. ಇದರ ಬೆನ್ನಲ್ಲೇ ಬೆಲೆ ಕಡಿತದ ಮಾತುಗಳು ಕೇಳಿಬಂದಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‌ಪಿಜಿ ಹಾಗೂ ಸಿಎನ್‌ಜಿ ಬೆಲೆಯಲ್ಲಿ ಕಡಿತವಾಗಿತ್ತು. ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನೂ ಕಡಿತಗೊಳಿಸಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 

Tap to resize

Latest Videos

ಹೇಗಿದೆ ನಿಮ್ಮ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ

ಬೆಂಗಳೂರಿನಲ್ಲಿ ಇಂದಿನ ಪ್ರತಿ ಲೀಟರ್ ಪೆಟ್ರೋಲ್ ದರ 101.94 ರೂಪಾಯಿ ಹಾಗೂ ಡೀಸೆಲ್ ಬೆಲೆ 87.89 ರೂಪಾಯಿ. ನಾಳೆ ಬೆಳಗ್ಗೆಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ 2 ರೂಪಾಯಿ ಇಳಿಕೆಯಾಗಲಿದೆ. ಪೆಟ್ರೋಲ್ ಬೆಲೆ 99.94 ರೂಪಾಯಿ ಹಾಗೂ ಡೀಸೆಲ್ ಬೆಲೆ 85.89 ರೂಪಾಯಿಗೆ ಇಳಿಕೆ ಆಗಲಿದೆ.

 

Oil Marketing Companies (OMCs) have informed that they have revised Petrol and Diesel Prices across the country. New prices would be effective from 15th March 2024, 06:00 AM.

Reduction in petrol and diesel prices will boost consumer spending and reduce operating costs for over… pic.twitter.com/FlUSdtg2Vi

— Ministry of Petroleum and Natural Gas #MoPNG (@PetroleumMin)

 

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಮತ್ತೆ 2 ರೂಪಾಯಿ ಕಡಿತಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಕೋಟ್ಯಾಂತರ ಭಾರತೀಯರ ಕುಟುಂಬ ಕಲ್ಯಾಣ ಹಾಗೂ ಅವರ ಹೊರೆಯನ್ನು ಕಡಿಮೆ ಮಾಡುವುದು ತಮ್ಮ ಗುರಿ ಎಂಬುದನ್ನು ಮತ್ತೆ ಸಾಬೀತುಪಡಿಸಿದ್ದಾರೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.  

ತೈಲ ಮಾರುಕಟ್ಟೆ ಕಂಪನಿಗಳು(OMC) ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಿದೆ.  ಬೆಲೆ ಕಡಿತದಿಂದ ಎಲ್ಲರಿಗೂ ಅನುಕೂಲವಾಗಲಿದೆ. 58 ಲಕ್ಷ ಭಾರಿ ಸರಕುಸಾಗಾಣೆ ವಾಹನಗಳು, 6ಕೋಟಿ ಕಾರು, 27 ಕೋಟಿ ದ್ವಿಚಕ್ರ ವಾಹನ ಸೇರಿದಂತೆ ದೇಶದ ಸಾರಿಗೆ ಸಂಪರ್ಕ ಕ್ಷೇತ್ರದಲ್ಲಿ ನಿರ್ಹಿಸುತ್ತಿರುವ ಎಲ್ಲರಿಗೂ ಅನುಕೂಲವಾಗಲಿದೆ ಎಂದು ಪೆಟ್ರೋಲಿಯಂ ಸಚಿವಾಲಯ ಟ್ವೀಟ್ ಮಾಡಿದೆ.  

ಮಾಲಿನ್ಯದಲ್ಲಿ ಪೆಟ್ರೋಲ್ ಡೀಸೆಲ್ ಕಾರಿಗಿಂತ ಎಲೆಕ್ಟ್ರಿಕ್ ವಾಹನ ಅಪಾಯಾಕಾರಿ, ಅಧ್ಯಯನ ವರದಿ!

click me!