ನಿರ್ಮಲಾ ಬಜೆಟ್'ಗೆ ಮೋದಿ ಪ್ರತಿಕ್ರಿಯೆ: ನವಭಾರತ ನಿರ್ಮಾಣಕ್ಕೆ ಪ್ರಕ್ರಿಯೆ!

By Web DeskFirst Published Jul 5, 2019, 2:51 PM IST
Highlights

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ಕೇಂದ್ರ ಬಜೆಟ್ ಶ್ಲಾಘಿಸಿದ ಪ್ರಧಾನಿ ಮೋದಿ| ಮಧ್ಯಮ ವರ್ಗಕ್ಕೆ ಸೇರಿದ ಬಜೆಟ್ ಎಂದ ಪ್ರಧಾನಿ ಮೋದಿ| ಸಮಾಜದ ಎಲ್ಲ ವರ್ಗಗಳಿಗೆ ಪೂರಕವಾದ ಬಜೆಟ್ ಎಂದ ಮೋದಿ| ಉದ್ಯಮ ಮತ್ತು ಉದ್ಯಮಿಗಳನ್ನು ಉತ್ತೇಜಿಸುವ ಬಜೆಟ್ ಎಂದ ಪ್ರಧಾನಿ|

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

PM Narendra Modi: Ye desh ko samridh aur jan jan ko samarth banane wala budget hai. Is budget se gareeb ko bal milega. yuva ko behtar kal milega pic.twitter.com/PllxCyqs4m

— ANI (@ANI)

ಇನ್ನು ಪ್ರಸಕ್ತ ಬಜೆಟ್'ನ್ನು ಮುಕ್ತ ಕಂಠದಿಂದ ಶ್ಲಾಘಿಸಿರುವ ಪ್ರಧಾನಿ ಮೋದಿ, ಪ್ರಸಕ್ತ ಬಜೆಟ್'ನ್ನು ಮಧ್ಯಮ ವರ್ಗದ ಬಜೆಟ್ ಎಂದು ಹೊಗಳಿದ್ದಾರೆ. ಸಮಾಜದ ಎಲ್ಲ ವರ್ಗಗಳಿಗೆ ಪೂರಕವಾದ ಬಜೆಟ್'ನ್ನು ಮಂಡಿಸಲಾಗಿದ್ದು, ಇದಕ್ಕಾಗಿ ತಾವು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಅವರ ತಂಡವನ್ನು ಅಭಿನಂದಿಸುವುದಾಗಿ ಮೋದಿ ಹೇಳಿದ್ದಾರೆ.

PM Narendra Modi: The budget for a New India has a roadmap to transform the agriculture sector of the country, this budget is one of hope pic.twitter.com/MeWoLXTC3g

— ANI (@ANI)

ಉದ್ಯಮ ಮತ್ತು ಉದ್ಯಮಿಗಳನ್ನು ಉತ್ತೇಜಿಸುವ ಬಜೆಟ್ ಇದಾಗಿದ್ದು, ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಯೋಜನೆಗಳಿಗೆ ತಮ್ಮ ಸಂಪೂರ್ಣ ಬೆಂಬವಿದೆ ಎಂದು ಪ್ರಧಾನಿ ನುಡಿದರು. ದೇಶದ ಆರ್ಥಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ತುಂಬುವ ಬಜೆಟ್ ಇದಾಗಿದ್ದು, 2024ರ ವೇಳೆಗೆ ದೇಶದ ಅರ್ಥ ವ್ಯವಸ್ಥೆಯನ್ನು 5 ಟ್ರಿಲಿಯನ್ ಯುಎಸ್ ಡಾಲರ್‌ಗೆ ಏರಿಸುವ ತಮ್ಮ ಗುರಿ ಈಡೇರುವುದು ನಿಶ್ಚಿತ ಎಂದು ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

click me!