Latest Videos

ಕರ್ನಾಟಕದಲ್ಲಿ ವಿದೇಶಿ ಹೂಡಿಕೆಗೆ ಮೋದಿ ಅಡ್ಡಿ: ಸಚಿವ ಪ್ರಿಯಾಂಕ್ ಖರ್ಗೆ

By Kannadaprabha NewsFirst Published Jun 26, 2024, 11:57 AM IST
Highlights

ಪ್ರಧಾನಿ ಮೋದಿ ಅವರಿಂದಾಗಿ ಈಗಾಗಲೇ ಐದಾರು ಕಂಪನಿಗಳು ರಾಜ್ಯದ ಬದಲು ಬೇರೆಡೆ ಹೂಡಿಕೆ ಮಾಡಲು ನಿರ್ಧರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ 

ಬೆಂಗಳೂರು(ಜೂ.26):   ರಾಜ್ಯದಲ್ಲಿ ಬಂಡವಾಳ ಹೂಡಲು ಒಪ್ಪಿಕೊಂಡ ವಿದೇಶಿ ಕಂಪನಿಗಳನ್ನು ಪ್ರಧಾನಿ ಮತ್ತು ಅವರ ಕಚೇರಿ ಅಧಿಕಾರಿಗಳು ಸಂಪರ್ಕಿಸಿ ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹೂಡಿಕೆ ಮಾಡುವಂತೆ ಒತ್ತಡ ಹೇರಿ ಅಲ್ಲಿಗೆ ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಮಾಹಿತಿ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಆಪಾದಿಸಿದ್ದಾರೆ.

ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಕಂಪನಿಗಳಿಗೆ ಪ್ರಧಾನಿ ಕಚೇರಿಯಿಂದ ಕೇವಲ ಒಂದು ದೂರವಾಣಿ ಕರೆ ಮೂಲಕ ಗುಜರಾತ್, ಉತ್ತರ ಪ್ರದೇಶದಲ್ಲಿ ಬಂಡವಾಳ ಹೂಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದ್ದಾರೆ. 

ಕರ್ನಾಟಕದಲ್ಲಿ 6 ಕಂಪನಿಗಳಿಂದ 620 ಕೋಟಿ ರೂ.ಹೂಡಿಕೆ: ಸಚಿವ ಪ್ರಿಯಾಂಕ್‌ ಖರ್ಗೆ

ಪ್ರಧಾನಿ ಮೋದಿ ಅವರಿಂದಾಗಿ ಈಗಾಗಲೇ ಐದಾರು ಕಂಪನಿಗಳು ರಾಜ್ಯದ ಬದಲು ಬೇರೆಡೆ ಹೂಡಿಕೆ ಮಾಡಲು ನಿರ್ಧರಿಸಿವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

click me!