
ನವದೆಹಲಿ(ಆ.22): ಭಾರತೀಯ ಅಂಚೆ ಹಣ ಪಾವತಿ ಬ್ಯಾಂಕ್(ಐಪಿಪಿಬಿ)ಯನ್ನು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 1ರಂದು ಉದ್ಘಾಟಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಇದರ ಒಂದು ಶಾಖೆಗಳಿರಲಿದ್ದು ಗ್ರಾಮೀಣ ಭಾಗದಲ್ಲಿ ಹಣಕಾಸು ಸೇವೆಯನ್ನು ಗುರಿಯಾಗಿಟ್ಟುಕೊಂಡು ಈ ಸೇವೆಯನ್ನು ಒದಗಿಸಲಾಗುತ್ತದೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನಲೆಯಲ್ಲಿ, ಏಳು ದಿನಗಳ ಶೋಕಾಚರಣೆಯಿಂದಾಗಿ ಈ ಹಣಕಾಸು ಸೇವೆ ಬ್ಯಾಂಕಿನ ಉದ್ಘಾಟನೆ ಮುಂದೂಡಲ್ಪಟ್ಟಿತ್ತು. ದೇಶದ 1.55 ಲಕ್ಷ ಅಂಚೆ ಕಚೇರಿ ಶಾಖೆಗಳನ್ನು ಐಪಿಪಿಬಿ ಸೇವೆ ತಲುಪಲಿದ್ದು ಗ್ರಾಮೀಣ ಪ್ರದೇಶದ ಜನರಿಗೆ ಹಣಕಾಸು ಸೇವೆ ಒದಗಿಸಲಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.