ಪಿಎನ್‌ಬಿ ಮತ್ತೊಂದು ವಿಕೆಟ್ ಪತನ: ಉಷಾ ಅನಂತಸುಬ್ರಹ್ಮಣ್ಯನ್ ವಜಾ!

By Web DeskFirst Published Aug 14, 2018, 12:48 PM IST
Highlights

ಪಿಎನ್‌ಬಿ ಯಿಂದ ಉಷಾ ಅನಂತಸುಬ್ರಹ್ಮಣ್ಯನ್ ವಜಾ! ಸೇವೆಯಿಂದ ವಜಾಗೊಳಿಸಿದ ಕೇಂದ್ರ ಸರ್ಕಾರ! ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಉಷಾ ಹೆಸರು ಉಲ್ಲೇಖ! ಉಷಾ ಪಿಎನ್‌ಬಿ ಯ ಮಾಜಿ ವ್ಯವಸ್ಥಾಪಕ ನಿರ್ದೇಶಕಿ

ನವೆಹಲಿ(ಆ.14): ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ಬಿ) ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಮಾಜಿ ವ್ಯವಸ್ಥಾಪಕ ನಿರ್ದೇಶಕಿ ಉಷಾ ಅನಂತಸುಬ್ರಹ್ಮಣ್ಯನ್ ಅವರನ್ನು ಸೇವೆಯಿಂದ ವಜಾಗೊಳಿಸದೆ.

14 ಸಾವಿರ ಕೋಟಿ ರುಪಾಯಿ ಪಿಎನ್‌ಬಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳ ಹಿಂದಷ್ಟೇ ಉಷಾ ಅವರನ್ನು ಅಲಹಬಾದ್ ಬ್ಯಾಂಕ್ ಮತ್ತು ಪಿಎನ್‌ಬಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಆದರೆ ಉಷಾ ಬ್ಯಾಂಕ್ ಉದ್ಯೋಗಿಯಾಗಿ ಮುಂದುವರೆದಿದ್ದರು. ಇದೀಗ ಉಷಾ ಅನಂತಸುಬ್ರಹ್ಮಣ್ಯನ್ ಅವರನ್ನು ಸೇವೆಯಿಂದಲೇ ವಜಾಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪಿಎನ್ ಬಿ ಹಗರಣಕ್ಕೆ ಸಂಬಂಧಿಸಿದತೆ ಕಳೆದ ಮೇ ತಿಂಗಳಲ್ಲಿ ಸಿಬಿಐ ಸಲ್ಲಿಸಿದ್ದ ಚಾರ್ಜ್​ಶೀಟ್​ನಲ್ಲಿ, ವಜ್ರ ವ್ಯಾಪಾರಿ ನೀರವ್ ಮೋದಿ, ಮೆಹುಲ್​ ಚೋಕ್ಸಿ ಹಾಗೂ ಉಷಾ ಸುಬ್ರಹ್ಮಣ್ಯನ್ ಸೇರಿದಂತೆ ಮೂವರು ಅಧಿಕಾರಿಗಳ ಹೆಸರಿದೆ.

ವಂಚನೆ ನಡೆದ ಸಮಯದಲ್ಲಿ ಪಿಎನ್‌ಬಿ ಅಲಹಾಬಾದ್ ಬ್ಯಾಂಕ್ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಉಷಾ ಅನಂತಸುಬ್ರಹ್ಮಣ್ಯನ್, ಪಿಎನ್‌ಬಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಕೆ.ವಿ. ಬ್ರಹ್ಮಾಜಿ ರಾವ್ ಮತ್ತು ಸಂಜೀವ್ ಶರ್ಮ ಅವರ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ಸೇರಿಸಲಾಗಿದೆ.

click me!