ಪಿಪಿಎಫ್‌, ಎನ್‌ಎಸ್‌ಸಿ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

Published : Mar 30, 2019, 03:40 PM IST
ಪಿಪಿಎಫ್‌, ಎನ್‌ಎಸ್‌ಸಿ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

ಸಾರಾಂಶ

ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್‌) ಹಾಗೂ ರಾಷ್ಟ್ರೀಯ ಉಳಿತಾಯ ನಿಧಿ(ಎನ್‌ಎಸ್‌ಸಿ) ಸೇರಿದಂತೆ ಯಾವುದೇ ಸಣ್ಣ ಉಳಿತಾಯ ಯೋಜನೆಗಳ 2019-20ನೇ ವಿತ್ತೀಯ ವರ್ಷದ ಮೊದಲ ತ್ರೈಮಾಸಿಕದ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 

ನವದೆಹಲಿ(ಮಾ.30): ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್‌) ಹಾಗೂ ರಾಷ್ಟ್ರೀಯ ಉಳಿತಾಯ ನಿಧಿ(ಎನ್‌ಎಸ್‌ಸಿ) ಸೇರಿದಂತೆ ಯಾವುದೇ ಸಣ್ಣ ಉಳಿತಾಯ ಯೋಜನೆಗಳ 2019-20ನೇ ವಿತ್ತೀಯ ವರ್ಷದ ಮೊದಲ ತ್ರೈಮಾಸಿಕದ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 

ಇದುವರೆಗೆ ನೀಡಲಾಗುತ್ತಿದ್ದ 8% ಬಡ್ಡಿದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ. ಅಂತೆಯೇ ಕಿಸಾನ್‌ ವಿಕಾಸ ಪತ್ರ(ಕೆವಿಪಿ)ಕ್ಕೂ 112 ತಿಂಗಳು ಪೂರ್ಣವಾದ ಬಳಿಕ ಈವರೆಗೆ ನೀಡಲಾಗುತ್ತಿದ್ದ 7.7% ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರವನ್ನು ತ್ರೈಮಾಸಿಕ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗುತ್ತಾ ಬರಲಾಗಿದ್ದು, ಮುಂದಿನ ಏಪ್ರಿಲ್‌-ಜೂನ್‌ ಅವಧಿಯ ಅಂದರೆ ಪ್ರಸಕ್ತ ವಿತ್ತೀಯ ವರ್ಷದ ಮೊದಲ ತ್ರೈಮಾಸಿಕದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. 

ಹಿಂದಿನ ವಿತ್ತೀಯ ವರ್ಷದ ನಾಲ್ಕನೇ ತ್ರೈಮಾಸಿಕದ ಬಡ್ಡಿದರವೇ ಮುಂದುವರಿಯಲಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಉಳಿದಂತೆ ಹಿರಿಯ ನಾಗರಿಕರ ಉಳಿತಾಯ ನಿಧಿಯ ಬಡ್ಡಿದರ(8.7%)ದಲ್ಲಿಯೂ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇನ್ನು ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯ ನಿಧಿಯ ಬಡ್ಡಿದರವನ್ನು 8.5%ಗೆ ನಿಗದಿಪಡಿಸಲಾಗಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಆರ್‌ಬಿಐ ಮಹತ್ವದ ನಿರ್ಧಾರ, ರೆಪೋ ದರ ಬದಲಾವಣೆಯಿಂದ ಸಾಲದ ಬಡ್ಡಿ ಭಾರಿ ಇಳಿಕೆ
ಒಂದು ರಷ್ಯನ್‌ ರುಬೆಲ್‌ಗೆ ಭಾರತದಲ್ಲಿ ಬೆಲೆ ಎಷ್ಟು? ರೂಪಾಯಿ ಅಥವಾ ರುಬೆಲ್‌, ಯಾವುದರ ಮೌಲ್ಯ ಜಾಸ್ತಿ?