ಉಳುವಾ ಯೋಗಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್: 6 ಸಾವಿರ ಸಹಾಯಧನ!

Published : Feb 01, 2019, 12:05 PM ISTUpdated : Feb 01, 2019, 12:23 PM IST
ಉಳುವಾ ಯೋಗಿಗೆ ಮೋದಿ ಸರ್ಕಾರದ ಬಂಪರ್ ಗಿಫ್ಟ್: 6 ಸಾವಿರ ಸಹಾಯಧನ!

ಸಾರಾಂಶ

ಮೋದಿ ಸರ್ಕಾರದಿಂದ ಕೃಷಿ ವಲಯಕ್ಕೆ ಬಂಪರ್ ಕೊಡುಗೆ| ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಸಿಹಿ ಸುದ್ದಿ| ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಿದ ಕೇಂದ್ರ ಸರ್ಕಾರ| 2000 ರೂ.ನಂತೆ ಮೂರು ಕಂತುಗಳಲ್ಲಿ ಸಹಾಯಧನ | ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿ

ನವದೆಹಲಿ(ಫೆ.01): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.

ಈ ವೇಳೆ ದೇಶದ ಕೃಷಿ ವಲಯಕ್ಕೆ ಅತ್ಯಂತ ಸಿಹಿ ಸುದ್ದಿ ನೀಡಿರುವ ಮೋದಿ ಸರ್ಕಾರ, ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಬಂಪರ್ ಕೊಡುಗೆ ಘೋಷಿಸಿದೆ.

ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ವರ್ಷಕ್ಕೆ 6000 ರೂ. ಸಹಾಯಧನ ಘೋಷಿಸಲಾಗಿದ್ದು, 2000 ರೂ.ನಂತೆ 3 ಕಂತುಗಳಲ್ಲಿ ಒಟ್ಟು 6000 ರೂ. ಸಹಾಯಧನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ.

5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ಮತ್ತು ಮಧ್ಯಮ ಹಿಡುವಳಿದಾರರಿಗೆ ಈ ಯೋಜನೆ ಅನ್ವಯವಾಗಲಿದ್ದು, ಮೂರು ಕಂತುಗಳಲ್ಲಿ ವಾರ್ಷಿಕವಾಗಿ 6000 ರೂ. ನೀಡಲಾಗುವುದು ಎಂದು ಹೇಳಲಾಗಿದೆ. ಅಲ್ಲದೇ ಈ ಹಣವನ್ನು ನೇರವಾಗಿ ರೈತನ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಇದರಿಂದ ರೈತ ಮಧ್ಯವರ್ತಿಗಳ ಉಪಟಳದಿಂದಲೂ ಮುಕ್ತಿ ಪಡೆಯಲಿದ್ದಾನೆ.
 

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಈ ರಾಶಿ ಜನರು ಹೊಸ ವರ್ಷ 2026 ರಲ್ಲಿ ಲಕ್ಷಾಧಿಪತಿಗಳಾಗುತ್ತಾರೆ, ಬಂಪರ್ ಯಶಸ್ಸು, ಸಂತೋಷ ಮತ್ತು ಸಮೃದ್ಧಿ
2026 ರಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿ ಹೇಗಿರುತ್ತದೆ? AI ಪ್ರಕಾರ ಲಾಭನಾ ಅಥವಾ ನಷ್ಟನಾ?