Karnataka Budget 2023 : ಟೈಲರ್‌ಗಳ ಮಕ್ಕಳಿಗೂ ಬರಲಿದೆ ರೈತ ವಿದ್ಯಾನಿಧಿ, ವಿದ್ಯಾರ್ಥಿಗಳಿಗೆ ಮಕ್ಕಳ ಬಸ್ಸು ಬಿಟ್ಟ ಸಿಎಂ!

By Santosh Naik  |  First Published Feb 17, 2023, 1:01 PM IST

ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾಗಿರುವ ರೈತ ವಿದ್ಯಾನಿಧಿ ಯೋಜನೆಯನ್ನು ಸಿಂಪಿಗರ (ಟೈಲರ್‌) ಮಕ್ಕಳಿಗೂ ವಿಸ್ತರಣೆ ಮಾಡಲಾಗಿದೆ. ಅದರೊಂದಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಮಕ್ಕಳ ಬಸ್ಸು ಯೋಜನೆ ಆರಂಭಿಸುವುದಾಗಿ ತಿಳಿಸಿದ್ದಾರೆ.
 


ಬೆಂಗಳೂರು (ಫೆ.17): ರಾಜ್ಯ ಬಿಜೆಪಿ ಸರ್ಕಾರದ ಮಹತ್ವದ ಯೋಜನೆಯಾಗಿರುವ ರೈತ ವಿದ್ಯಾನಿಧಿ ಯೋಜನೆಯನ್ನು ಈ ಬಾರಿ ಸಿಂಪಿಗರ ಮಕ್ಕಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಬಜೆಟ್‌ನಲ್ಲಿ ಸಿಎಂ ಘೋಷಣೆ ಮಾಡಿದ್ದಾರೆ. ರಾಜ್ಯದ 10.32 ಲಕ್ಷ ಮಕ್ಕಳಿಗೆ ರೈತ ವಿದ್ಯಾನಿಧಿ ಯೋಜನೆಯ ಅಡಿ ಈವರೆಗೂ 725 ಕೋಟಿ ರೂಪಾಯಿ ಮೊತ್ತವನ್ನು ನೀಡಲಾಗಿದೆ. 2022-23ರಲ್ಲಿ ಈ ಸೌಲಭ್ಯವನ್ನು ಭೂರಹಿತ ಕೃಷಿ ಕೂಲಿ ಕಾರ್ಮಿಕರು, ನೇಕಾರರು, ಮೀನುಗಾರರು, ಯೆಲ್ಲೋ ಬೋರ್ಡ್‌ ಟ್ಯಾಕ್ಸಿ ಚಾಲಕರು ಹಾಗೂ ಆಟೋ ರಿಕ್ಷಾ ಚಾಲಕರ ಮಕ್ಕಳಿಗೆ ವಿಸ್ತರಣೆ ಮಾಡಲಾಗಿತ್ತು. ಹೆಚ್ಚುವರಿಯಾಗಿ 3 ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ  ರೂಪಾಯಿ ಮೊತ್ತವನ್ನು ನೀಡಲಾಗಿದೆ. ಪ್ರಸಕ್ತ ವರ್ಷ ಈ ಯೋಜನೆಯನ್ನು ಸಿಂಪಿಗರ ಮಕ್ಕಳಿಗೆ ವಿಸ್ತರಣೆ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.

Karnataka Budget 2023: ಮತ ಭೇಟೆಗೆ ಕರಾವಳಿ ಮೀನುಗಾರರಿಗೆ ಗಾಳ ಹಾಕಿದ ಸಿಎಂ

ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:
ರಾಜ್ಯದ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಹೊಂದಲು ಅನುವು ಮಾಡಿಕೊಡುವ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆಯನ್ನು ಪ್ರಾರಂಭ ಮಾಡಲಾಗುತ್ತದೆ.  ಇದರ ಅಡಿಯಲ್ಲಿ ಸರ್ಕಾರಿ ಪದವಪೂರ್ವ ಮತ್ತು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುತ್ತದೆ. ಈ ಉಚಿತ ಉನ್ನತ ಶಿಕ್ಷಣದಿಂದ ರಾಜ್ಯದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

Karnataka Budget 2023 ಉತ್ತರ ಕರ್ನಾಟಕಕ್ಕೆ ಮತ್ಸ್ಯಘಮ, ಮೀನುಗಾರಿಕೆ ದೋಣಿಗೆ ಹಣ!

ಮಕ್ಕಳ ಬಸ್ಸು ಯೋಜನೆ: ರಾಜ್ಯದಲ್ಲಿ 19 ಲಕ್ಷ ಶಾಲಾ ಕಾಲೇಜು ವಿದ್ಯಾರ್ಥಿಗಳು ತಮ್ಮ ಶಿಕ್ಷಣಕ್ಕಾಗಿ ಸಾರ್ವಜನಿಕ ಬಸ್ಸುಗಳ ಸೇವೆಯನ್ನು ಅವಲಂಬಿಸಿದ್ದಾರೆ. ಇಂಥ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ವರ್ಷದಲ್ಲಿ ಸಾರಿಗೆ ನಿಗಮಗಳ ಮೂಲಕ 100 ಕೋಟಿ ರೂಪಾಯಿ ವೆಚ್ಚದಲ್ಲಿ1 ಸಾವಿರ ಹೊಸ ಕಾರ್ಯಾಚರಣೆಗನ್ನು ಮಾಡಲು ಮಕ್ಕಳ ಬಸ್ಸು ಎನ್ನುವ ಹೊಸ ಯೋಜನೆ ಆರಂಭ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ.

Tap to resize

Latest Videos

ಪಿಎಂ ಶ್ರೀ ಯೋಜನೆ ಜಾರಿ: ಉತ್ತಮ ಮೂಲಭೂತ ಸೌಕರ್ಯಗಳು ಮತ್ತು ಸೂಕ್ತ ಕಲಿಕಾ ಸಂಪನ್ಮೂಲಗಳನ್ನು ಮಕ್ಕಳಿಗೆ ಒದಗಿಸಲು ಕೇಂದ್ರದ ಹೊಸ ಯೋಜನೆಯಾದ ಪಿಎಂ ಶ್ರೀಯನ್ನು 100 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಷ್ಠಾನ ಮಾಡಲಾಗುತ್ತದೆ.

ಶಾಲೆಗಳಲ್ಲಿ 5581 ಶೌಚಾಲಯ: ನರೇಗಾ ಯೋಜನೆಯ ಅಡಿಯಲ್ಲಿ ಈಗಾಗಲೇ ಶಾಲೆಗಳಲ್ಲಿ ಶೌಚಾಲಯಗಳನ್ನ ನಿರ್ಮಾಣ ಮಾಡಲಾಗುತ್ತಿದೆ. 2023-24ರಲ್ಲಿ 5581 ಶೌಚಾಲಯಗಳ ನಿರ್ಮಾಣ ಪೂರ್ಣ ಮಾಡಲಿದ್ದೇವೆ. ಇದಕ್ಕಾಗಿ 80 ಕೋಟಿ ರೂ ಹಂಚಿಕೆ ಮಾಡಲಾಗಿದೆ. ಅದರಲ್ಲಿ 50 ಕೋಟಿ ರೂಪಾಯಿಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಿಗೆ ಒದಗಿಸಲಾಗಿದೆ ಎಂದು ತಿಳಿಸಿದರು.

click me!