
ಜೈಪುರ(ಸೆ.10): ತೈಲದರ ಏರಿಕೆ ಖಂಡಿಸಿ ಇಂದು ವಿಪಕ್ಷಗಳು ಭಾರತ್ ಬಂದ್ ಗೆ ಕರೆ ನೀಡಿವೆ. ಈ ಮಧ್ಯೆ ರಾಜಸ್ಥಾನದ ವಸುಂಧರಾ ರಾಜೆ ಸರ್ಕಾರದ ಸಚಿವರೊಬ್ಬರು ತೈಲದರ ಏರಿಕೆಗೆ ಜನಸಾಮಾನ್ಯ ಏನು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ರಾಜಸ್ತಾನದ ಸಚಿವ ರಾಜಕುಮಾರ್ ರಿನ್ವಾ ಪ್ರಕಾರ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾದರೆ ಜನತೆ ತಮ್ಮ ಇತರ ಖರ್ಚುಗಳನ್ನು ಬಂದ್ ಮಾಡಿ ತಮ್ಮ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ತುಂಬಿಸಬೇಕು. ವರದಿಗಾರರೊಬ್ಬರು ಕೇಳಿದ ಪ್ರಶ್ನೆಗೆ ರಾಜಕುಮಾರ್ ರಿನ್ವಾ ಈ ರೀತಿ ಉತ್ತರಿಸಿದ್ದಾರೆ.
ಜನ ತಮ್ಮ ಇತರ ಖರ್ಚುಗಳನ್ನು ಕಡಿಮೆ ಮಾಡಿದರೆ ತೈಲದರ ಏರಿಕೆಯ ಬಿಸಿ ತಟ್ಟುವುದಿಲ್ಲ ಎಂದು ರಿನ್ವಾ ಹೇಳಿದ್ದು, ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇನ್ನೇನು ಊಟವನ್ನೂ ಬಿಟ್ಟು ಪೆಟ್ರೋಲ್ ತುಂಬಿಸಬೇಕಾ ಎಂದು ಕೆಲವರು ರಿನ್ವಾ ವಿರುದ್ದ ಹರಿಹಾಯ್ದಿದ್ದಾರೆ.
ರಿನ್ವಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರವ ಕಾಂಗ್ರೆಸ್ ನಾಯಕ ಸಚಿನ್ ಪೈಲೆಟ್, ಬಿಜೆಪಿ ನಾಯಕತ್ವ ಎಷ್ಟು ಕೊಬ್ಬಿದೆ ಎಂಬುದಕ್ಕೆ ರಿನ್ವಾ ಹೇಳಿಕೆಯೇ ಕಾರಣ ಎಂದು ಕಿಡಿಕಾರಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.