
ಮ್ಯಾಂಚೆಸ್ಟರ್(ಫೆ.18): ಟಾಟಾ ಗ್ರೂಪ್ ಮುಖ್ಯಸ್ಥ ರತನ್ ಟಾಟಾ ಅವರಿಗೆ ಉದ್ಯಮ ವಲಯದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ರತನ್ ಟಾಟಾ ಉದ್ಯಮ ವಲಯ ಮತ್ತು ಸಾಮಾಜಿಕ ಕಾರ್ಯದಲ್ಲಿ ಅಪಾರ ಸಾಧನೆ ಮಾಡಿದ್ದು, ಅವರ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂದು ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.
ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡೇಮ್ ನ್ಯಾನ್ಸಿ ರೊತ್'ವೆಲ್ ಇತ್ತಿಚೀಗೆ ಮುಂಬೈಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರತನ್ ಟಾಟಾ ಅವರನ್ನು ಭೇಟಿ ಮಾಡಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ರತನ್ ಟಾಟಾ ನೇತೃತ್ವದಲ್ಲಿ ಟಾಟಾ ಗ್ರೂಪ್ 1991-2012ರ ಅವಧಿಯಲ್ಲಿ ಜಾಗತಿಕ ಸಂಸ್ಥೆಯಾಗಿ ಬೆಳೆದಿದ್ದು, ಅವರ ನಾಯಕತ್ವವನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ ಎಂದು ಮ್ಯಾಂಚೆಸ್ಟರ್ ವಿಶ್ವವಿದ್ಯಾಲಯ ಸ್ಪಷ್ಟಪಡಿಸಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.