
ಮುಂಬೈ(ಸೆ.19): ರೂಪಾಯಿ ಕುಸಿತವನ್ನು ತಡೆಯಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಪಾಟ್ ಮಾರ್ಕೆಟ್(ತುರ್ತು ಒಪ್ಪಂದ ಮತ್ತು ತುರ್ತು ವಹಿವಾಟು) ಮತ್ತು ಫಾರ್ವರ್ಡ್ ಮಾರ್ಕೆಟ್( ತುರ್ತು ಒಪ್ಪಂದ ಮತ್ತು ಭವಿಷ್ಯದಲ್ಲಿ ಮಾರಾಟ) ನಲ್ಲಿ ಮಧ್ಯೆ ಪ್ರವೇಶಿಸಬೇಕೆಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಕೊರಾಪ್ ವರದಿ ತಿಳಿಸಿದೆ.
ಸ್ಪಾಟ್ ಮತ್ತು ಫಾರ್ವರ್ಡ್ ಮಾರುಕಟ್ಟೆಯಲ್ಲಿ ವಿದೇಶಿ ಕರೆನ್ಸಿಗಳನ್ನು ನೀಡಿರುವ ದರದಲ್ಲಿ ಮಾರಾಟ ಮಾಡುವುದು ಅಥವಾ ಖರೀದಿಸಬಹುದಾಗಿದೆ.
ಎಕೊರಾಪ್ ವರದಿಯ ಪ್ರಕಾರ, ಜೂನ್ 2008ರಿಂದ ಮೇ 2009ರವರೆಗೆ ಭಾರತೀಯ ರೂಪಾಯಿ ಬೆಲೆ ಶೇ. 13ರಷ್ಟು ಇಳಿಕೆಯಾದ ಸಮಯದಲ್ಲಿ, ವಿದೇಶಿ ವಿನಿಮಯ ಮೀಸಲು 312 ಶತಕೋಟಿ ಡಾಲರ್‌ನಷ್ಟು ಇದ್ದರೂ ಕೂಡ ಆರ್‌ಬಿಐ 43 ಶತಕೋಟಿ ಡಾಲರ್‌ಗೆ ಮಾರಾಟ ಮಾಡಿತ್ತು ಎಂದು ತಿಳಿಸಿದೆ.
1990ರ ದಶಕದಲ್ಲಿ ಕೂಡ ಒಟ್ಟು ವಿದೇಶಿ ವಿನಿಮಯ ಮೀಸಲು 40 ಶತಕೋಟಿ ಡಾಲರ್‌ಗಿಂತ ಕಡಿಮೆಯಾಗಿದ್ದಾಗ, ವಿದೇಶಿ ವಿನಿಮಯ ಮಾರುಕಟ್ಟೆಗೆ ಆರ್‌ಬಿಐ ಮಧ್ಯ ಪ್ರವೇಶಿಸಿ ರೂಪಾಯಿ ಕುಸಿತವನ್ನು ತಡೆಗಟ್ಟಲು ಒಟ್ಟು ವಿದೇಶಿ ವಿನಿಮಯವನ್ನು ಶೇ. 8ರಿಂದ 9ರಷ್ಟು ಮಾರಾಟ ಮಾಡಿತ್ತು ಎಂಬುದನ್ನು ವರದಿ ನೆನಪಿಸಿದೆ.
ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಯನ್ನು ನೋಡುತ್ತಿದ್ದರೆ, ಆರ್‌ಬಿಐ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಹೆಚ್ಚುವರಿ 25 ಶತಕೋಟಿ ಡಾಲರ್‌ನ್ನು ಮಾರಾಟ ಮಾಡಬಹುದಾಗಿದೆ ಎಂದು ಎಸ್‌ಬಿಐ ವರದಿ ತಿಳಿಸಿದೆ.
ಡಾಲರ್ ಎದುರು ರೂಪಾಯಿ ಬೆಲೆ ಸ್ಥಿರವಾಗಿ ಉಳಿಯಲು ಆರ್‌ಬಿಐ ಮಧ್ಯವರ್ತಿಗಳ ಮೂಲಕ ಮಧ್ಯಪ್ರವೇಶಿಸುವ ಸಾಧ್ಯತೆಯಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.