
ನವದೆಹಲಿ(ಸೆ.17): ದೇಶದ ಆರ್ಥಿಕ ಬೆಳವಣಿಗೆ ಕುಂಠಿತಗೊಂಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಪುನಶ್ಚೇತನ ಕಷ್ಟಸಾಧ್ಯ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಭಿಪ್ರಾಯಪಟ್ಟಿದ್ದಾರೆ.
ಜಿಡಿಪಿ ಅಭಿವೃದ್ಧಿ ದರ ಶೇ.5ಕ್ಕೆ ಕುಸಿತ ಕಂಡಿದ್ದ ಅನಿರೀಕ್ಷಿತ ಬೆಳವಣಿಗೆ ಎಂದು ಹೇಳಿರುವ ಶಕ್ತಿಕಾಂತ್, ವೇಗದ ಆರ್ಥಿಕ ಪುನಶ್ಚೇತನ ಕೇವಲ ಊಹಾಪೋಹ ಎಂದು ಹೇಳಿದ್ದಾರೆ.
ವಿವಿಧ ಕ್ಷೇತ್ರಗಳ ಉತ್ಪಾದನಾ ಸಾಮರ್ಥ್ಯ ಕುಸಿತವಾಗಿದ್ದು, ಇದಕ್ಕೆ ಪೂರಕವಾಗಿ ಉದ್ಯೋಗದಲ್ಲೂ ಭಾರೀ ಕಡಿತ ಕಂಡುಬರುತ್ತಿದೆ ಎಂದು ಆರ್‌ಬಿಐ ಗವರ್ನರ್ ಆತಂಕ ವ್ಯಕ್ತಪಡಿಸಿದ್ದು, ದೀರ್ಘ ಕಾಲದ ಯೋಜನೆಗಳ ಮೂಲಕ ಪುನಶ್ಚೇತನಕ್ಕೆ ದಾರಿ ಕಂಡುಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ.
ಆರ್ಥಿಕ ಕುಸಿತದ ಆತಂಕವನ್ನು ಆರ್‌ಬಿಐ ಮೊದಲೇ ಗ್ರಹಿಸಿತ್ತು ಎಂದಿರುವ ಶಕ್ತಿಕಾಂತ್, ಇದೇ ಕಾರಣಕ್ಕೆ ಬಂಡವಾಳ ಹೂಡಿಕೆಗೆ ಉತ್ತೇಜನ ನೀಡಲು ಹಾಗೂ ಬೇಡಿಕೆ ಹೆಚ್ಚಿಸುವ ಸಲುವಾಗಿ ರೆಪೋ ದರದಲ್ಲಿ 25 ಮೂಲಾಂಕದಷ್ಟು ಕಡಿತ ಮಾಡಲು ನಿರ್ಧರಿಸಲಾಯಿತು ಎಂದು ತಿಳಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.