
ಮುಂಬೈ(ಡಿ.28): ಮುಂಬೈನ ಸಿಟಿ ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವವರ ವಿತ್ ಡ್ರಾ ಮಾಡುವ ಹಣದ ಮಿತಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 5 ಸಾವಿರ ರೂ.ಗೆ ಹೆಚ್ಚಿಸಿದೆ.
ಸಹಕಾರಿ ಬ್ಯಾಂಕ್ ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್‌ನಲ್ಲಿ ಆರ್‌ಬಿಐ ವಿತ್ ಡ್ರಾ ಮಿತಿಯನ್ನು 1 ಸಾವಿರ ರೂ. ಗೆ ಮಿತಿಗೊಳಿಸಿತ್ತು.
ಇದೀಗ ಬ್ಯಾಂಕ್ ಹಣಕಾಸಿನ ಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಎಸ್‌ಬಿ ಅಕೌಂಟ್ ಅಥವಾ ಚಾಲ್ತಿ ಖಾತೆ ಹೊಂದಿರುವವರ ವಿತ್ ಡ್ರಾ ಮಿತಿಯನ್ನು 5 ಸಾವಿರ ರೂ.ಗೆ ಹೆಚ್ಚಿಸಿದೆ.
ಆರ್ ಬಿಐ ಅನುಮತಿ ಇಲ್ಲದೆಯೇ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಯಾವುದೇ ಸಾಲ ನೀಡುವುದು, ಮುಂಗಡ ಹಣ ನೀಡುವುದು ಅಥವಾ ಹೂಡಿಕೆ ಮಾಡುವುದಕ್ಕೆ ಅವಕಾಶ ಇಲ್ಲ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.