
ನವದೆಹಲಿ(ಜ.17): ದೇಶದ ಜಿಡಿಪಿ ಅತ್ಯಂತ ವೇಗವಾಗಿ ಏರುತ್ತಿರುವ ಹಿನ್ನೆಲೆಯಲ್ಲಿ, ವ್ಯವಸ್ಥೆಗೆ ಮತ್ತಷ್ಟು ಕರೆನ್ಸಿ ಸೇರಿಸುವ ಅಗತ್ಯವಿದೆ ಎಂದು ಆರ್‌ಬಿಐ ಹೇಳಿದೆ.
ಅಪನಗದೀಕರಣದ ಬಳಿಕ ಉಂಟಾದ ಗೊಂದಲಗಳು ಒಂದೊಂದಾಗಿ ನಿವಾರಣೆಯಾಗುತ್ತಿದ್ದು, ಜಿಡಿಪಿ ಕೂಡ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥೆಗೆ ಮತ್ತಷ್ಟು ಹೊಸ ಕರೆನ್ಸಿ ಪರಿಚಯಿಸಲು ಇದೂ ಸೂಕ್ತ ಸಮಯ ಎಂದು ಆರ್‌ಬಿಐ ಅಭಿಪ್ರಾಯಪಟ್ಟಿದೆ.
ಹೊಸ 2,000 ಮತ್ತು 500 ರೂ. ಮುಖಬೆಲೆಯ ಕರೆನ್ಸಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮುದ್ರಿಸುವ ಅವಶ್ಯಕತೆ ಇದ್ದು, ಹೆಚ್ಚಿನ ಹಣದ ಹರಿವು ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಆರ್‌ಬಿಐ ಹೇಳಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.