ಬ್ಯಾಂಕ್‌ಗಳಿಗೆ ಬಿತ್ತು ಭಾರೀ ದಂಡ: ನಿಮ್ಮ ಬ್ಯಾಂಕ್ ಇದ್ರೆ....!

By Web DeskFirst Published Feb 13, 2019, 8:15 PM IST
Highlights

ಏಳು ಬ್ಯಾಂಕ್‌ಗಳಿಗೆ ದಂಡ ವಿಧಿಸಿದ ಆರ್‌ಬಿಐ| ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘಿಸಿದ ಆರೋಪ| ಆರ್‌ಬಿಐ ನಿಧಿ ಬಳಕೆ, ಮೇಲ್ವಿಚಾರಣೆಯಲ್ಲಿ ವಂಚನೆ ಆರೋಪ| 

ಮುಂಬೈ(ಫೆ.13): ಮಹತ್ವದ ಬೆಳವಣಿಗೆಯೊಂದರಲ್ಲಿ ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಒಟ್ಟು ಏಳು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿದೆ.

ಆರ್‌ಬಿಐ ನಿಧಿ ಬಳಕೆ, ಮೇಲ್ವಿಚಾರಣೆಯಲ್ಲಿ ವಂಚನೆ ಸೇರಿ ಹಲವು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಆರ್‌ಬಿಐ ಈ ಬ್ಯಾಂಕ್‌ಗಳ ಮೇಲೆ ಕಠಿಣ ಕ್ರಮ ಜರುಗಿಸಿದೆ ಎನ್ನಲಾಗಿದೆ.

ಪ್ರಮುಖವಾಗಿ ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಎಚ್‌ಡಿಎಫ್ ಸಿ, ಕೋಟಾಕ್ ಮಹೀಂದ್ರಾ ಬ್ಯಾಂಕ್ ಸೇರಿದಂತೆ ಏಳು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿದೆ.

ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸಿ ಬ್ಯಾಂಕ್ ಗಳು ಆರ್‌ಬಿಐ ನಿಧಿ ಬಳಕೆ, ಮೇಲ್ವಿಚಾರಣೆಯಲ್ಲಿ ವಂಚನೆ ಸೇರಿ ಹಲವು ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ 1.5 ಕೋಟಿ ರೂ ದಂಡ ತೆರಬೇಕಾಗಿದೆ. ಅಲ್ಲದೇ ಆಂಧ್ರ ಬ್ಯಾಂಕ್‌ಗೆ 1 ಕೋಟಿ ರೂ. ದಂಡ ವಿಧಿಸಲಾಗಿದೆ.

ಇನ್ನು ನಿಮ್ಮ ಗ್ರಾಹಕರ ಬಗ್ಗೆ ತಿಳಿಯಿರಿ (ಕೆವೈಸಿ) ಮಾನದಂಡಗಳನ್ನು ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ಎಚ್‌ಡಿಎಫ್‌ಸಿ ಬ್ಯಾಂಕ್, ಐಡಿಬಿಐ ಬ್ಯಾಂಕ್ ಮತ್ತು ಕೋಟಾಕ್ ಮಹೀಂದ್ರಾ ಬ್ಯಾಂಕ್ ಗಲಿಗೆ 20 ಲಕ್ಷ ರೂ. ದಂಡ ಹಾಕಲಾಗಿದೆ.

click me!