ಆಗಸ್ಟ್ ತಿಂಗಳಲ್ಲಿ ಈ 5 ನಿಯಮಗಳಲ್ಲಿ ಬದಲಾವಣೆ; ಜೇಬಿನ ಮೇಲೆ ಹೆಚ್ಚಲಿದೆ ಹೊರೆ!

Published : Jul 31, 2023, 03:39 PM IST
ಆಗಸ್ಟ್ ತಿಂಗಳಲ್ಲಿ ಈ 5 ನಿಯಮಗಳಲ್ಲಿ ಬದಲಾವಣೆ; ಜೇಬಿನ ಮೇಲೆ ಹೆಚ್ಚಲಿದೆ ಹೊರೆ!

ಸಾರಾಂಶ

ಪ್ರತಿ ತಿಂಗಳು ಹಣಕಾಸಿಗೆ ಸಂಬಂಧಿಸಿದ ಒಂದಿಷ್ಟು ನಿಯಮಗಳಲ್ಲಿ ಬದಲಾವಣೆಯಾಗೋದು ಸಾಮಾನ್ಯ. ಅದರಂತೆ ಆಗಸ್ಟ್ ತಿಂಗಳಲ್ಲಿ ಕೂಡ ಕೆಲವು ನಿಯಮಗಳಲ್ಲಿ ಬದಲಾವಣೆಯಾಗಲಿದೆ. ಅವು ಯಾವುವು?

Business Desk:ಪ್ರತಿ ಹೊಸ ತಿಂಗಳ ಪ್ರಾರಂಭದಲ್ಲಿ ಒಂದಿಷ್ಟು ನಿಯಮಗಳಲ್ಲಿ ಬದಲಾವಣೆಯಾಗೋದು ಸಾಮಾನ್ಯ. ನಾಳೆಯಿಂದ ಆಗಸ್ಟ್ ತಿಂಗಳು ಪ್ರಾರಂಭವಾಗಲಿದೆ. ಆಗಸ್ಟ್ ತಿಂಗಳಲ್ಲಿ ಕೂಡ ಕೆಲವು ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಜನಸಾಮಾನ್ಯರ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಹಣಕಾಸಿಗೆ ಸಂಬಂಧಿಸಿದ ಕೆಲವು ನಿಯಮಗಳು ಖರ್ಚಿನ ಹೊರೆಯನ್ನು ಕೂಡ ಹೆಚ್ಚಿಸಲಿವೆ. ಆಗಸ್ಟ್ ತಿಂಗಳಲ್ಲಿ ವಿಳಂಬ ಐಟಿಆರ್ ಸಲ್ಲಿಕೆಗೆ ದಂಡ, ಜಿಎಸ್ ಟಿ ನಿಯಮಗಳಲ್ಲಿ ಬದಲಾವಣೆ, ಕ್ರೆಡಿಟ್ ಕಾರ್ಡ್ ಕ್ಯಾಶ್ ಬ್ಯಾಕ್ ನಿಯಮದಲ್ಲಿ ಬದಲಾವಣೆ, ಅಡುಗೆ ಅನಿಲದ ಬೆಲೆ ಹೆಚ್ಚಳ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳ ಸೇರಿದಂತೆ ಅನೇಕ ಬದಲಾವಣೆಗಳಾಗಲಿವೆ. ಈ ಎಲ್ಲ ಬದಲಾವಣೆಗಳು ನಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಕಾರಣ ಈ ಬಗ್ಗೆ ಮಾಹಿತಿ ಹೊಂದಿರೋದು ಅಗತ್ಯ.  ಅಲ್ಲದೆ, ಹಣಕಾಸಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ಆಗಸ್ಟ್ ತಿಂಗಳು ಅಂತಿಮ ಗಡುವಿದ್ದರೆ ತಿಳಿದು ಅದನ್ನು ಪೂರ್ಣಗೊಳಿಸುವ ಮೂಲಕ ಹೆಚ್ಚಿನ ಹಣಕಾಸಿನ ಹೊರೆಯಿಂದ ತಪ್ಪಿಸಿಕೊಳ್ಳಬಹುದು. ಹಾಗಾದ್ರೆ ಆಗಸ್ಟ್ ತಿಂಗಳಲ್ಲಿ ಯಾವೆಲ್ಲ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ? ಇಲ್ಲಿದೆ ಮಾಹಿತಿ.

1.ಜಿಎಸ್ ಟಿ ನಿಯಮಗಳಲ್ಲಿ ಬದಲಾವಣೆ
ಸರ್ಕಾರ ಈಗಾಗಲೇ ತಿಳಿಸಿರುವಂತೆ 2023ರ ಆಗಸ್ಟ್ 1ರಿಂದ 5 ಕೋಟಿ ರೂ.ಗಿಂತ ಅಧಿಕ ವಹಿವಾಟಿನ ವ್ಯವಹಾರಗಳಿಗೆ ಎಲೆಕ್ಟ್ರಾನಿಕ್ ಇನ್ ವಾಯ್ಸ್ ನೀಡೋದು ಅಗತ್ಯ. ಹೀಗಿರುವಾಗ ಜೆಸ್ ಟಿ ವ್ಯಾಪ್ತಿಗೊಳಪಡುವ ಕಾರ್ಯಗಳಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ವಿಸ್ತಾರವಾಗಿ ತಿಳಿದುಕೊಳ್ಳುವ ಮೂಲಕ ಎಲೆಕ್ಟ್ರಾನಿಕ್ ಇನ್ ವಾಯ್ಸ್ ಬಗ್ಗೆ ಸಿದ್ಧತೆ ನಡೆಸೋದು ಅಗತ್ಯ ಕೂಡ.

10 ವರ್ಷದ ಹಿಂದೆ ನೀವು ಈ ಸ್ಟಾಕ್‌ನಲ್ಲಿ 10,000 ರೂ. ಹೂಡಿಕೆ ಮಾಡಿದ್ರೆ ಈಗ ನಿಮ್ಮ ಬಳಿ 7 ಲಕ್ಷ ರೂ. ಇರ್ತಿತ್ತು!

2.ವಿಳಂಬ ಐಟಿಆರ್ ಸಲ್ಲಿಕೆಗೆ ದಂಡ
2023-24ನೇ ಮೌಲ್ಯಮಾಪನ ವರ್ಷದ ಐಟಿಆರ್ ಸಲ್ಲಿಕೆಗೆ ಜುಲೈ 31ಅಂತಿಮ ಗಡುವು. ಹೀಗಾಗಿ ಆಗಸ್ಟ್ 1ರಿಂದ ಐಟಿಆರ್ ಸಲ್ಲಿಕೆ ಮಾಡಲು ಸಾಧ್ಯವಿಲ್ಲ. ಆದರೆ, ವಿಳಂಬ ಐಟಿಆರ್ ಸಲ್ಲಿಕೆ ಮಾಡಬಹುದು. ಆದರೆ, ಇದಕ್ಕೆ ದಂಡ ಕಟ್ಟಬೇಕು. ಕೆಲವು ಸಂದರ್ಭಗಳಲ್ಲಿ ನೀವು ಜೈಲು ಕಂಬಿಯನ್ನು ಕೂಡ ಎಣಿಸಬೇಕಾಗಬಹುದು. ಹಾಗೆಯೇ ನಿಮಗೆ ತೆರಿಗೆ ರೀಫಂಡ್ ಕೂಡ ಸಿಗುವುದಿಲ್ಲ. 2023-24ನೇ ಮೌಲ್ಯಮಾಪನ ವರ್ಷದ ವಿಳಂಬ ಐಟಿಆರ್ ಸಲ್ಲಿಕೆಗೆ ಡಿಸೆಂಬರ್ 31 ಕೊನೆಯ ದಿನಾಂಕವಾಗಿದೆ. ಒಟ್ಟು 5ಲಕ್ಷ ರೂ. ಹಾಗೂ ಅದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವ ತೆರಿಗೆದಾರರು ಜು.31ರ ಬಳಿಕ ವಿಳಂಬ ಐಟಿಆರ್ ಸಲ್ಲಿಕೆ ಮಾಡಿದ್ರೆ 5,000ರೂ. ದಂಡ ಪಾವತಿಸಬೇಕು.

3.ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆ
ಆಗಸ್ಟ್ ನಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಬದಲಾವಣೆಯಾಗಲಿದೆ. ಅದರ ಜೊತೆಗೆ ವಾಣಿಜ್ಯ ಉದ್ದೇಶದ ಸಿಲಿಂಡರ್ ಬೆಲೆಯಲ್ಲಿ ಕೂಡ ವ್ಯತ್ಯಾಸವಾಗಲಿದೆ. ಕಚ್ಚಾ ತೈಲ ಕಂಪನಿಗಳು ಸಾಮಾನ್ಯವಾಗಿ  ಪ್ರತಿ ತಿಂಗಳು 1 ಹಾಗೂ 16ನೇ ತಾರೀಕಿನಂದು ಅಡುಗೆ ಅನಿಲದ ಬೆಲೆಯಲ್ಲಿ ಬದಲಾವಣೆ ಮಾಡುತ್ತವೆ. ಇನ್ನು ಇದರ ಹೊರತಾಗಿ ಪಿಎನ್ ಜಿ ಹಾಗೂ ಸಿಎನ್ ಜಿ ದರದಲ್ಲಿ ಕೂಡ ಬದಲಾವಣೆಯಾಗುವ ಸಾಧ್ಯತೆಯಿದೆ. 

ಇನ್ಮುಂದೆ ಪಿಜಿ ಹಾಸ್ಟೆಲ್‌ಗಳಲ್ಲಿ ಉಳಿಯುವವರಿಗೂ ಶೇ. 12 ಜಿಎಸ್‌ಟಿ ಹೊರೆ: ವಿದ್ಯಾರ್ಥಿಗಳಿಗೆ ಸಂಕಷ್ಟ

4.ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಬದಲಾವಣೆ
ಸಾಮಾನ್ಯವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಬದಲಾವಣೆ ಮಾಡೋದಾದ್ರೆ ತಿಂಗಳ ಮೊದಲ ದಿನ ಮಾಡಲಾಗುತ್ತದೆ. ಇದೇ ಕಾರಣದಿಂದ ಪೆಟ್ರೋಲ್ ಹಾಗೂ ಡೀಸೆಲ್ದರದಲ್ಲಿ ಆಗಸ್ಟ್ 1ರಿಂದ ಬದಲಾವಣೆ ಮಾಡುವ ಸಾಧ್ಯತೆಯಿದೆ. ಕಳೆದ ವರ್ಷದ ಮೇ 21ರ ಬಳಿಕ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

5.ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಬದಲಾವಣೆ
ಒಂದು ವೇಳೆ ನೀವು ಎಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದರೆ, ನಿಮ್ಮ ಜೇಬಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ಆಗಸ್ಟ್12ರಿಂದ ಎಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಸಿ  ಫ್ಲಿಪ್ ಕಾರ್ಟ್ ಮೂಲಕ ಖರೀದಿ ಮಾಡೋರಿಗೆ ಕ್ಯಾಶ್ ಬ್ಯಾಕ್ ಸಿಗಲಿದೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!