
ಬೆಂಗಳೂರು(ಮಾ.28): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚುನಾವಣೆ ನೀತಿ ಸಂಹಿತೆ ಜಾರಿ ಇರುವಾಗ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
1 ನೇ ಜನೆವರಿ 2019ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳದ ಆದೇಶ ಹೊರಡಿಸಲಾಗಿದ್ದು, ತುಟ್ಟಿಭತ್ಯೆಯ ಮೂಲ ವೇತನ ಶೇ 3.75ರಿಂದ ಶೇ 6.50ಗೆ ಹೆಚ್ಚಿಸಿ ಸರ್ಕಾರದ ಆದೇಶ ಹೊರಡಿಸಿದೆ.
ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿ ಪೂರ್ಣ ನೌಕರರಿಗೆ ಮತ್ತು ಅರೆಕಾಲಿಕ ನೌಕರಿ ವೇತನ ಶ್ರೇಣಿಯಲ್ಲಿರುವ, ಪೂರ್ಣ ಅವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗು ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರುಗಳಿಗೆ ಈ ಆದೇಶ ಅನ್ವಯವಾಗಲಿದೆ.
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ಆದೇಶ ಹೊರಡಿಸಲಾಗಿದ್ದು, ಇದು ವಿವಾದಕ್ಕೀಡಾಗುವ ಸಾಧ್ಯತೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.