
ನವದೆಹಲಿ(ಜು.21): ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯ ನಿರ್ಧಾರಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು.
ಜಿಎಸ್‌ಟಿಯ 28 ನೇ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದ್ದು, ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ದೇಶದ ಮಹಿಳೆಯರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಹಿಂದೆ ಸ್ಯಾನಿಟರಿ ನ್ಯಾಪ್ಕಿನ್ಸ್‌ಗೆ ಶೇ.12 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.