ಎಸ್‌ಬಿಐ ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಮೋಸ: 30 ಜನರ ಬಂಧನ!

Published : Jul 12, 2018, 04:25 PM IST
ಎಸ್‌ಬಿಐ ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಮೋಸ: 30 ಜನರ ಬಂಧನ!

ಸಾರಾಂಶ

ಎಸ್‌ಬಿಐ ಕ್ರೆಡಿಟ್ ಗ್ರಾಹಕರಿಗೆ ಪಂಗನಾಮ 30 ಜನರನ್ನು ಬಂಧಿಸಿದ ಸೈಬರಾಬಾದ್ ಪೊಲೀಸ್ ಬ್ಯಾಂಕ್ ಸಿಬ್ಬಂಧಿ ಎಂದು ಹೇಳಿ ಮೋಸ ಮಾಡುತ್ತಿದ್ದ ಜಾಲ ಒಟ್ಟು 5 ಕೋಟಿ ರೂ. ವಂಚಿಸಿದ ಖದೀಮರ ತಂಡ

ನವದೆಹಲಿ(ಜು.22): ಎಸ್‌ಬಿಐ ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಸುಮಾರು 5 ಕೋಟಿ ರೂ. ವಂಚಿಸಿದ ಆರೋಪದ ಮೇಲೆ 30 ಜನರ ತಂಡವನ್ನು ಸೈಬರಾಬಾದ್ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ಎಸ್‌ಬಿಐ ಸಿಬ್ಬಂದಿ ಎಂದು ಹೇಳಿಕೊಂಡು ಗ್ರಾಹಕರಿಗೆ ವಂಚಿಸುತ್ತಿದ್ದ ಬೃಹತ್ ಜಾಲವನ್ನು ಸೆರೆ ಹಿಡಿದಿದ್ದಾಗಿ ಸೈಬರಾಬಾದ್ ಪೊಲೀಸ್ ಆಯುಕ್ತ ವಿ.ಸಿ. ಸಜ್ಜನರ್ ಹೇಳಿದ್ದಾರೆ.

ಎಸ್‌ಬಿಐ ಸಿಬ್ಬಂದಿ ಎಂದು ಕ್ರೆಡಿಟ್ ಕಾರ್ಡ್ ಗ್ರಾಹಕರಿಗೆ ಕರೆ ಮಾಡಿ ಅವರಿಂದ ಕ್ರೆಡಿಟ್ ಕಾರ್ಡ್ ಡೀಟೆಲ್ಸ್ ಪಡೆದುಕೊಂಡು ನಂತರ ಆನ್‌ಲೈನ್ ಮೂಲಕ 5 ಕೋಟಿ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ತಂಡದ ಮುಖ್ಯಸ್ಥ ವಿಜಯ್ ಕುಮಾರ್ ಶರ್ಮಾ ಸೇರಿದಂತೆ ಎಲ್ಲ 30 ಖದೀಮರನ್ನು ಸೆರೆಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸದ್ಯ ದೆಹಲಿಯ ಜಿಲ್ಲಾ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರುಪಡಿಸಿದ್ದು, ನಂತರ ಅವರನ್ನು ಸೈಬರಾಬಾದ್ ಗೆ ಕರೆತರಲಾಗುವುದು ಎಂದು ಆಯುಕ್ತ ವಿ.ಸಿ. ಸಜ್ಜನರ್ ಸ್ಪಷ್ಟಪಡಿಸಿದ್ದಾರೆ.

PREV

ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

click me!

Recommended Stories

ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!
ಇದೇ ಮೊದಲ ಬಾರಿಗೆ ಅತೀ ದುಬಾರಿಯಾದ ಬೆಳ್ಳಿ, ಚಿನ್ನಕ್ಕಿಂತ ವೇಗದಲ್ಲಿ ಸಾಗುತ್ತಿದೆ ಸಿಲ್ವರ್