
ಮುಂಬೈ(ಫೆ.09): ಎಲ್ಲಿ ನೋಡಿದರೂ ಸಿಹಿ ಸುದ್ದಿಗಳದ್ದೇ ಕಾರುಬಾರು. ಅದರಲ್ಲೂ ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಯಾದ ಬಳಿಕ, ಒಂದಾದ ಮೇಲೊಂದರಂತೆ ಸರ್ಕಾರಿ ಸಂಸ್ಥೆಗಳು ಜನತೆಗೆ ಸಿಹಿ ಸುದ್ದಿ ನೀಡಲು ಪೈಪೋಟಿಗಿಳಿದಿವೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ವಿತ್ತೀಯ ನೀತಿಯನ್ನು ಪ್ರಕಟಿಸಿದ ಬೆನ್ನಲ್ಲೇ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 30 ಲಕ್ಷ ರೂ.ವರೆಗೆ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಶೇಕಡಾ 0.05ರಷ್ಟು ಕಡಿತಗೊಳಿಸಿದೆ.
ಕೆಲ ದಿನಗಳ ಹಿಂದಷ್ಟೇ ಆರ್‌ಬಿಐ ರೆಪೋ ದರವನ್ನು ಕಡಿತಗೊಳಿಸಿತ್ತು. ಆಗಲೇ ಗೃಹ ಮತ್ತು ವಾಹನ ಸಾಲ ಅಗ್ಗವಾಗುವ ಸಂಭವನೀಯತೆಯನ್ನು ಗುರುತಿಸಲಾಗಿತ್ತು.
ಅದರಂತೆ ದೇಶದ ಬೃಹತ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಎಸ್‌ಬಿಐ ಇದೀಗ 30 ಲಕ್ಷ ರೂ.ವರೆಗೆ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಶೇಕಡಾ 0.05ರಷ್ಟು ಕಡಿತಗೊಳಿಸಿದೆ.
ಆದರೆ ಆರ್‌ಬಿಐ ರೆಪೋ ದರ ಕಡಿತಗೊಳಿಸಿದ್ದರೂ, ಠೇವಣಿ ಮೇಲಿನ ಬಡ್ಡಿದರವನ್ನು ಎಸ್‌ಬಿಐಗೆ ಕಡಿತಗೊಳಿಸುವುದು ಕಷ್ಟವಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.