
ಬೆಂಗಳೂರು (ಜ.29): ಇನ್ಫೋಸಿಸ್ ಸಹ ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್ಸಿಯ ಮಾಜಿ ನಿರ್ದೇಶಕ ಪಿ.ಬಲರಾಮ್ ಸೇರಿ 18 ಮಂದಿ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೋಮವಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಬೋವಿ ಸಮುದಾಯಕ್ಕೆ ಸೇರಿದ ಸಣ್ಣ ದುರುಗಪ್ಪ ಅವರ ಅರ್ಜಿಗೆ ಸಂಬಂಧಿಸಿ ಈ ದೂರು ದಾಖಲಾಗಿದೆ. ಐಐಎಸ್ಸಿಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಅಧ್ಯಾಪಕರಾಗಿದ್ದಾಗ ತಮ್ಮನ್ನು 2014ರಲ್ಲಿ ನಕಲಿ ಹನಿಟ್ರ್ಯಾಪ್ ಮಾಡಿಸಿ ಸೇವೆಯಿಂದ ಮಾಡಲಾಗಿದೆ. ಅಲ್ಲದೆ, ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರಿನಲ್ಲಿ ದುರುಗಪ್ಪ ಆರೋಪಿಸಿದ್ದರು.
ಗೋವಿಂದನ್ ರಂಗರಾಜನ್, ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿಶಿ, ಚಟ್ಟೋಪಧ್ಯಾಯ ಕೆ. ಪ್ರದೀಪ್ ಡಿ.ಸಾವ್ಕರ್ ಮತ್ತು ಮನೋಹರನ್ ಮತ್ತಿತರರು ಈ ಪ್ರಕರಣದಲ್ಲಿ ಇತರೆ ಆರೋಪಿಗಳು. ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್ಸಿಯ ಟ್ರಸ್ಟಿ ಬೋರ್ಡ್‌ನ ಸದಸ್ಯರಾಗಿದ್ದಾರೆ.
ಕರ್ನಾಟಕದ ಟಾಪ್ 5 ಆಗರ್ಭ ಶ್ರೀಮಂತರು ಯಾರು ಗೊತ್ತಾ?
ಐಐಎಸ್ಸಿ ಅಧ್ಯಾಪಕರಿಂದ ಅಥವಾ ಐಐಎಸ್ಸಿ ಟ್ರಸ್ಟಿಗಳ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿರುವ ಕ್ರಿಸ್ ಗೋಪಾಲಕೃಷ್ಣನ್ ಅವರಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ಕೆಲಸದ ಅವಧಿ ಅವರ ವಿವೇಚನೆಗೆ ಬಿಟ್ಟಿದ್ದು: ಇನ್ಫಿ ನಾರಾಯಣ ಮೂರ್ತಿ ಯುಟರ್ನ್
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.