
ಮುಂಬೈ(ಮೇ.10): ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ ಗುರುವಾರ 1062 ಅಂಕಗಳ ಭಾರೀ ಕುಸಿತ ಕಂಡು 72404 ಅಂಕಗಳಲ್ಲಿ ಮುಕ್ತಾಯವಾಗಿದೆ.
ಪರಿಣಾಮ ಹೂಡಿಕೆದಾರರಿಗೆ ಒಂದೇ ದಿನ 7.33 ಲಕ್ಷ ಕೋಟಿ ರು.ನಷ್ಟು ನಷ್ಟವಾಗಿದೆ. ಇದೇ ವೇಳೆ ನಿಫ್ಟಿ ಕೂಡಾ 345 ಅಂಕ ಕುಸಿದು 21957 ಅಂಕಗಳಲ್ಲಿ ಕೊನೆಗೊಂಡಿದೆ.
ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಸೌರ ವಿದ್ಯುತ್ ಉತ್ಪಾದಕ ರಾಷ್ಟ್ರ ಎನಿಸಿಕೊಂಡ ಭಾರತ!
ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತ ಅನಿಶ್ಚಿತತೆ, ವಿದೇಶಿ ಸಾಂಸ್ಥಿಕೆ ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆ ಹಿಂದಕ್ಕೆ ಪಡೆದಿದ್ದು, ಜಾಗತಿಕ ಷೇರು ಪೇಟೆಗಳ ಕುಸಿತ, ಪ್ರಮುಖ ಕಂಪನಿಗಳ ತ್ರೈಮಾಸಿಕ ವರದಿ ನಿರೀಕ್ಷಿತ ಮಟ್ಟದಲ್ಲಿ ಇಲ್ಲದೆ ಇರುತ್ದು, ರಿಲಯನ್ಸ್, ಎಚ್‌ಡಿಎಫ್‌ಸಿಯಂಥ ಪ್ರಮುಖ ಕಂಪನಿಗಳ ಷೇರುಗಳು ಭಾರೀ ಪ್ರಮಾಣದಲ್ಲಿ ಮಾರಾಟವಾಗಿದ್ದು ಸೂಚ್ಯಂಕವನ್ನು ಭಾರೀ ಪ್ರಮಾಣದಲ್ಲಿ ಕುಸಿಯುವಂತೆ ಮಾಡಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.