ರಾಜ್ಯ ಸರ್ಕಾರ ಮಾಡಲಿದೆ ಚೀನಾ ಜೊತೆ ಫೈಟ್: ರಾಜ್ಯಪಾಲರ ಉವಾಚ!

By Web Desk  |  First Published Feb 6, 2019, 3:24 PM IST

ಇಂದಿನಿಂದ ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನ| ವಿಧಾನಮಂಡಲದ ಉಭಯ ಸದನ ಉದ್ದೇಶಿಸಿ ರಾಜ್ಯಪಾಲರ ಭಾಷಣ| ಸಮ್ಮಿಶ್ರ ಸರ್ಕಾರದ ಕೈಗಾರಿಕಾ ನೀತಿ ಬಿಚ್ಚಿಟ್ಟ ರಾಜ್ಯಪಾಲರು| ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆ| ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಕರ್ನಾಟಕಕ್ಕೆ ಪ್ರಥಮ ಸ್ಥಾನ| 


ಬೆಂಗಳೂರು(ಫೆ.06): ರಾಜ್ಯ ಸಮ್ಮಿಶ್ರ ಸರ್ಕಾರ 2019ರ ಬಜೆಟ್ ಮಂಡನೆಗೆ ಸಿದ್ಧವಾಗಿದ್ದು, ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದೆ.

ಇಂದು ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಬಾಯಿ ವಾಲಾ, ವಿಧಾನಮಂಡಲದ ಉಭಯ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದರು.

Tap to resize

Latest Videos

ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಿದೆ ಎಂದು ರಾಜ್ಯಪಾಲ ವಜೂ ಭಾಯಿವಾಲಾ ಹೇಳಿದ್ದಾರೆ.

ರಾಜ್ಯದಲ್ಲಿನ ಕೈಗಾರಿಕೆ ಅಭಿವೃದ್ಧಿಗಾಗಿ 9 ಜಿಲ್ಲೆಗಳಲ್ಲಿ ಕೈಗಾರಿಕೆ ಕ್ಲಸ್ಟರ್‌ ಸ್ಥಾಪನೆಗೆ ಮೈತ್ರಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿರುವುದಾಗಿ ರಾಜ್ಯಪಾಲರು ತಿಳಿಸಿದರು.

ಕರ್ನಾಟಕ 2018ನೇ ಸಾಲಿನ ಬಂಡವಾಳ ಹೂಡಿಕೆ ಆಕರ್ಷಿಸುವುದರಲ್ಲಿ ರಾಷ್ಟ್ರದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಕೈಗಾರಿಕೆ ನೀತಿ 2014-19ರ ಅಡಿಯಲ್ಲಿ 3.49 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಹೊಂದಿದೆ.

2.5 ಲಕ್ಷ ಯುವಕರಿಗೆ ತರಬೇತಿ ಯುವಜನತೆಗೆ ಉದ್ಯೋಗಾವಕಾಶ ಸೃಷ್ಟಿಸಲು ಶ್ರಮಿಸುತ್ತಿದ್ದು, 2018-19ರಲ್ಲಿ ತರಬೇತಿ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಎಂದು ರಾಜ್ಯಪಾಲರು ಉಲ್ಲೇಖಿಸಿದರು.

ಬಜೆಟ್ ಅಧಿವೇಶನ: ರಾಜ್ಯಪಾಲ ಬಿಚ್ಚಿಟ್ಟರು ರಾಜ್ಯದ ಆರ್ಥಿಕ ‘ಸತ್ಯ’!

click me!