Petrol Rate:ಇಂದು ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆಯಾ? ಇಲ್ಲಿದೆ ಮಾಹಿತಿ

By Suvarna News  |  First Published Dec 6, 2021, 10:47 AM IST

ವಾಹನ ಸವಾರರಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ನಿರೀಕ್ಷೆ ಮುಂದುವರಿದಿರೋ ಬೆನ್ನಲ್ಲೇ ರಾಜ್ಯದಲ್ಲಿ ಇಂಧನ ದರ ಕಳೆದ ಕೆಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ.
 


ಬೆಂಗಳೂರು (ಡಿ.6): ಕಳೆದ ಕೆಲವು ದಿನಗಳಿಂದ ದೆಹಲಿ (Delhi) ಹೊರತುಪಡಿಸಿ ದೇಶದ ಬೇರೆ ಯಾವುದೇ ನಗರಗಳಲ್ಲೂ ಪೆಟ್ರೋಲ್ (Petrol)ಹಾಗೂ ಡೀಸೆಲ್ (Diesel) ದರದಲ್ಲಿ(Price)  ವ್ಯತ್ಯಯ ಕಂಡುಬಂದಿಲ್ಲ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude oil) ಬೆಲೆ ಇಳಿಕೆಗೊಂಡ ಹಿನ್ನೆಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಇಳಿಕೆಯಾಗಬಹುದು, ನಾಳೆ ಇಳಿಕೆಯಾಗಬಹುದು ಎಂಬ ನಿರೀಕ್ಷೆ ಮಾತ್ರ ಮುಂದುವರಿದಿದೆ. ಕೇಂದ್ರ ಹಾಗೂ ಆಯಾ ರಾಜ್ಯ ಸರ್ಕಾರಗಳು ಇಂಧನ ದರದ ಮೇಲಿನ ತೆರಿಗೆಗಳನ್ನು ಕಡಿತಗೊಳಿಸಿದ್ರೆ ಮಾತ್ರ ಬೆಲೆಯಲ್ಲಿ ಇಳಿಕೆ ಕಾಣಲು ಸಾಧ್ಯ. ಕಳೆದ ಕೆಲವು ತಿಂಗಳಿಂದ ಬೆಲೆಯೇರಿಕೆ ಬಿಸಿ ಜನಸಾಮಾನ್ಯರ ಬದುಕಿನ ಮೇಲೆ ನೇರ ಪರಿಣಾಮ ಬೀರಿದೆ. ಎಲ್ಪಿಜಿ(LPG) ದರ ಕೂಡ ಗಗನಕ್ಕೇರಿರೋದು ಗೃಹಿಣಿಯರ ನೆಮ್ಮದಿ ಕೆಡಿಸಿದೆ. ಈ ಮಧ್ಯೆ ಕಳೆದ ಒಂದು ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿರೋದು ವಾಹನ ಸವಾರರಿಗೆ ಸ್ವಲ್ಪ ಮಟ್ಟಿಗಿನ ನೆಮ್ಮದಿ ಮೂಡಿಸಿದೆ. ಆದ್ರೂ ಇಂಧನ ದರದಲ್ಲಿ ಆದಷ್ಟು ಬೇಗ ಇಳಿಕೆಯಾಗಲಿ ಎಂಬ ನಿರೀಕ್ಷೆ ಮಾತ್ರ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.6) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ (Cities)ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ?

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದ್ದು, ಕಳೆದ 13  ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ.  ಪೆಟ್ರೋಲ್ ಹಾಗೂ ಡೀಸೆಲ್ ಎರಡರ ಬೆಲೆಯಲ್ಲೂ ನಿನ್ನೆಗಿಂತ 0.09 ರೂ. ಕಡಿಮೆಯಾಗಿದ್ದು, ಕಳೆದ ಕೆಲವು ದಿನಗಳಿಂದ ೦.೦9 ರೂ. ಏರಿಳಿತದ ಆಟ ಮುಂದುವರಿದಿದೆ.  ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ(Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ  84.56ರೂ.ಇದೆ. ಬಿಸಿಲ ನಗರಿ ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ. ಇಲ್ಲೂ ಕೂಡ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಎಂದಿನಂತೆ ಪೈಸೆಗಳಷ್ಟು ಹಾವು-ಏಣಿ ಆಟ ಮುಂದುವರಿದಿದೆ.  

Latest Videos

undefined

ವಿಶೇಷ ತಳಿ ಆಲೂಗಡ್ಡೆ ಮೇಲಿನ ಪೆಪ್ಸಿಕೋ ಹಕ್ಕುಸ್ವಾಮ್ಯ ರದ್ದು

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Protest against Reliance: ರಿಲಯನ್ಸ್‌ ವಿರುದ್ಧ ಸಿಡಿದ 4.50 ಲಕ್ಷ ಸೇಲ್ಸ್‌ಮನ್‌!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

click me!