
ವಾಷಿಂಗ್ಟನ್(ಮಾ.06): ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಂದು ಹೊಡೆತ ನೀಡಲಾಗಿದ್ದು, ಪಾಕಿಸ್ತಾನದ ನಾಗರಿಕರಿಗೆ ನೀಡಲಾಗುವ ವೀಸಾ ಅವಧಿಯನ್ನು 5 ವರ್ಷದಿಂದ ಕೇವಲ 3 ತಿಂಗಳಿಗೆ ಇಳಿಕೆ ಮಾಡಲಾಗಿದೆ.
ಪಾಕಿಸ್ತಾನಕ್ಕೆ ಆರ್ಥಿಕ ನೆರವನ್ನು ಕಡಿತಗೊಳಿಸಿದ್ದ ಅಮೆರಿಕ, ಇದೀಗ ವೀಸಾ ಹೊಡೆತ ನೀಡಿದ್ದು, ವೀಸಾ ಅವಧಿ ಕೇಳಿದ ಪಾಕಿಸ್ತಾನಿಯರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.
ಹೊಸ ನಿಯಮ ಪಾಕಿಸ್ತಾನದ ಪೌರತ್ವ ಹೊಂದಿರುವ ನಾಗರಿಕರಿಗಷ್ಟೇ ಅಲ್ಲದೇ ಪಾಕಿಸ್ತಾನದ ಪತ್ರಕರ್ತರಿಗೂ ಅನ್ವಯವಾಗಲಿದೆ ಎಂದು ಅಮೆರಿಕ ರಾಯಭಾರಿ ಕಚೇರಿ ವಕ್ತಾರರು ಸ್ಪಷ್ಟಪಡಿಸಿದ್ದಾರೆ.
ಇಷ್ಟೇ ಅಲ್ಲದೇ ಪಾಕಿಸ್ತಾನದ ವೀಸಾ ಅರ್ಜಿಯ ಶುಲ್ಕವನ್ನೂ ಅಮೆರಿಕ 160 ಡಾಲರ್ ನಿಂದ 192 ಡಾಲರ್ ಗೆ ಏರಿಕೆ ಮಾಡಿದೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.