
ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಈ ವೇಳೆ ಹೊಸ ನಾಣ್ಯಗಳ ಬಿಡುಗಡೆಯನ್ನು ಕೇಂದ್ರ ಹಣಕಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. 1,2,5,10 ಮತ್ತು 20 ರೂ. ಮುಖಬೆಲೆಯ ಹೊಸ ನಾಣ್ಯಗಳನ್ನು ಹೊಸದಾಗಿ ಪರಿಚಯಿಸಲಾಗಿದೆ.
ಅಂಧರಿಗೆ ಅನುಕೂಲವಾಗಲಿ ಎಂದು ಈ ಹೊಸ ನಾಣ್ಯಗಳನ್ನು ವಿಶೇಷವಾಗಿ ತಯಾರಿಸಲಾಗಿದೆ. ಅಲ್ಲದೇ ಕಳೆದ ಮಾರ್ಚ್‌ನಲ್ಲೇ ಈ ನಾಣ್ಯಗಳನ್ನು ತಯಾರಿಸಲಾಗಿದ್ದು, ಇಂದು ಅಧಿಕೃತವಾಗಿ ಚಲಾವಣೆಗೆ ಬಂದಿವೆ.
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.