50 ವರ್ಷದ ಬಡ್ಡಿ ರಹಿತ ಸಾಲ ಮತ್ತೊಂದು ವರ್ಷ ಮುಂದುವರಿಕೆ, ಇದರಿಂದ ರಾಜ್ಯಕ್ಕೇನು ಲಾಭ?

By Suvarna News  |  First Published Feb 1, 2024, 12:27 PM IST

ಕೇಂದ್ರ ಮಧ್ಯಂತರ ಬಜೆಟ್ ಮಂಡನೆಯಾಗಿದೆ. ಜನಪ್ರಿಯ ಯೋಜನೆಗಳಿಲ್ಲದಿದ್ದರೂ ರಾಜ್ಯಗಳಿಗೆ ನೀಡಿರುವ ಕೆಲ ಕೊಡುಗೆಗಳನ್ನು ಮುಂದುವರಿಸಲಾಗಿದೆ. ಫಸ್ಟ್ ಡೆವಲಪ್‌ಮೆಂಟ್ ಇಂಡಿಯಾ ಅಡಿಯಲ್ಲಿ 50 ವರ್ಷ ಬಡ್ಡಿ ರಹಿತ ಸಾಲ ಯೋಜನೆಯನ್ನು ಮತ್ತೊಂದು ವರ್ಷಕ್ಕೆ ಮುಂದುವರಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದರಿಂದ ರಾಜ್ಯಕ್ಕೀರುವ ಲಾಭವೇನು?
 


ನವದೆಹಲಿ(ಫೆ.01) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೆಲ ಜನಪ್ರಿಯ ಘೋಷಣೆಗಳನ್ನು ನಿರೀಕ್ಷಿಸಲಾಗಿತ್ತು. ಆದರೆ ಯಾವುದೇ ಜನಪ್ರಿಯ ಘೋಷಣೆ ಮಾಡದ ಕೇಂದ್ರ ಸರ್ಕಾರ ಕೆಲ ಕೊಡುಗೆಗಳನ್ನು ಮುಂದುವರಿಸಿದೆ. ಫಸ್ಟ್ ಡೆವಲಪ್‌ಮೆಂಟ್ ಇಂಡಿಯಾ ಅಡಿಯಲ್ಲಿ ರಾಜ್ಯಗಳಿಗೆ ನೀಡುವ 50 ವರ್ಷಗಳ ಕಾಲದ ಬಡ್ಡಿ ರಹಿತ ಸಾಲವನ್ನು ಮತ್ತೊಂದು ವರ್ಷಕ್ಕೆ ಮುಂದುವರಿಸಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ  10 ಲಕ್ಷ ಕೋಟಿ ರೂಪಾಯಿ ಮೀಸಲಿಡುವ ಮೂಲಕ, ವರ್ಧಿತ ಕ್ಯಾಪೆಕ್ಸ್ ಜಿಡಿಪಿಯ ಶೇ 3.3 ರಷ್ಟಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.  

ಹೊಸದಾಗಿ ಸ್ಥಾಪಿಸಲಾಗಿರು ಮೂಲಸೌಕರ್ಯ ಹಣಕಾಸು ಸಚಿವಾಲಯ, ಖಾಸಗಿ ಹೂಡಿಕೆ ಆಕರ್ಷಿಸಲು ಸಹಾಯ ಮಾಡಲಿದೆ ಎಂದು ನಿರ್ಮಾಲಾ ಸೀತಾರಾಮನ್ ಹೇಳಿದ್ದಾರೆ. ಅಮೃತ ಕಾಲದಲ್ಲಿರುವ ಭಾರತಕ್ಕೆ ಮೂಲಸೌಕರ್ಯ ವರ್ಗೀಕರಣ, ಹಣಕಾಸು ಚೌಕಟ್ಟು ನಿರ್ವಹಿಸಲು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.  

Tap to resize

Latest Videos

undefined

ಜನಪ್ರಿಯ ಬಜೆಟ್ ಅಲ್ಲ, ಜುಲೈನಲ್ಲಿ ವಿಕಸಿತ ಭಾರತದ ನೀಲಿನಕ್ಷೆ ಘೋಷಣೆ...

ಮೂಲಭೂತ ಸೌಕರ್ಯದಡಿಯಲ್ಲಿ ತಂತ್ರಜ್ಞಾನ ಅಭಿವೃದ್ಧಿಗೂ ಈ ಬಾರಿಯ ಬಜೆಟ್ ಹೆಚ್ಚಿನ ಒತ್ತು ನೀಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಗಳು 50 ವರ್ಷಗಳ ಅವಧಿ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲವನ್ನು ಪಡೆಯಬಹುದು.  2023ರ ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರಿಗೆ ಸಂಪರ್ಕದಲ್ಲಿ ಎದುರಾಗುತ್ತಿರುವ ವೆಚ್ಚ ಕಡಿಮೆ ಮಾಡಲು ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ ಗತಿ ಶಕ್ತಿ ಯೋಜನೆ ಜಾರಿಗೆ ತಂದಿದ್ದರು. ಈ ಮೂಲಕ ಲಾಜಿಸ್ಟಿಕ್ಸ್ ಮತ್ತೆ ಸಂಪರ್ಕ ಮೂಲಸೌಕರ್ಯ ಯೋಜನೆಗಳು ಕನಿಷ್ಠ 500 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯನ್ನು ಒಳಗೊಳ್ಳಲಿದೆ ಎಂದು ಘೋಷಿಸಿದ್ದರು. ಇದೀಗ ನಿರ್ಮಾಲಾ ಸೀತಾರಾಮನ್  ಫಸ್ಟ್ ಡೆವೆಲಪ್‌ಮೆಂಟ್ ಇಂಡಿಯಾ ಅಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಮಹತ್ತರ ಬದಲಾವಣೆಗೆ ಕ್ರಮ ಕೈಗೊಂಡಿದ್ದಾರೆ. 

ಫಸ್ಟ್ ಡೆವಲಪ್ ಇಂಡಿಯಾ ಎಂಬ ಧ್ಯೇಯ ವಾಕ್ಯದೊಂದಿಗೆ ವಿದೇಶಗಳೊಂದಿಗೆ ದ್ವಿಪಕ್ಷೀಯ ಸಂಬಂಧಗಳಿಗೆ ಹೆಚ್ಚು ಒತ್ತು ನೀಡಲಾಗಿದೆ.  ತಂತ್ರಜ್ಞಾನಗಳ ಅಭಿವೃದ್ಧಿ, ರೈಲ್ವೇ ಬೋಗಿಗಳ ಅಭಿವೃದ್ಧಿ ಸೇರಿದಂತೆ ಹಲವು ಉಪಕ್ರಮಗಳನ್ನು ಇದೇ ಯೋಜನೆಯಡಿ ವಿಕಸಿತ ಭಾರತದ ಭವಿಷ್ಯಕ್ಕೆ ಅಡಿಪಾಯ ಹಾಕಲು ಯೋಜನೆ ರೂಪಿಸಲಾಗಿದೆ.

BUDGET 2024: ನೀಲಿ-ಕೆನೆ ಬಣ್ಣದ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್‌

ಆಯಾ ರಾಜ್ಯ ಸರ್ಕಾರಗಳು 50 ವರ್ಷ ಬಡ್ಡಿ ರಹಿತ ಸಾಲ ಪಡೆದು, ರಾಜ್ಯದಲ್ಲಿನ ಮೂಲಭೂತ ಸೌಕರ್ಯಗಳನ್ನು ಸುಲಭವಾಗಿ ಅಭಿವೃದ್ಧಿಪಡಿಸಲು ಸಾಧ್ಯವಿದೆ. ಪ್ರತಿ ಹಳ್ಳಿಗೆ ರಸ್ತೆ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಿದೆ. 
 

click me!