Union Budget 2024 ದಾಖಲೆಯ 7ನೇ ಬಜೆಟ್ ಮಂಡನೆಯಲ್ಲಿ 9 ಆದ್ಯತೆ ಕ್ಷೇತ್ರ ಘೋಷಣೆ!

By Chethan KumarFirst Published Jul 23, 2024, 11:25 AM IST
Highlights

ಮೋದಿ ಸರ್ಕಾರದ 3.0 ಮೊದಲ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಆರಂಭದಲ್ಲೇ ಪ್ರಮುಖ 9 ಆದ್ಯತೆ ಕ್ಷೇತ್ರವನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
 

ನವದೆಹಲಿ(ಜು.23) ಭಾರಿ ನಿರೀಕ್ಷೆಯ ಪ್ರಧಾನಿ ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಮಂಡನೆಯಾಗುತ್ತಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ದಾಖಲೆ ಬರೆದಿದ್ದಾರೆ. ಬಜೆಟ್ ಭಾಷಣದ ಆರಂಭದಲ್ಲೇ 2024-25ರ ಆಯವ್ಯಯ ದಾಖಲೆ ಪತ್ರದಲ್ಲಿ ಆದ್ಯತೆ ನೀಡಿದ ಕ್ಷೇತ್ರಗಳನ್ನು ಘೋಷಿಸಲಾಗಿದೆ. ಈ ಪೈಕಿ ಯುವ, ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ.  ಇದೇ ವೇಳೆ ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೃಷಿ ಹಾಗೂ ಕೃಷಿ ಸಂಬಂದಿತ ಕ್ಷೇತ್ರಗಳಿಗೆ ಬರೋಬ್ಬರಿ 1.52 ಲಕ್ಷ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ತರಕಾರಿ ಬೆಳೆಗಳಿಗೆ ಉತ್ತೇಜನ ನೀಡಲು ವಿಶೇಷ ಯೋಜನೆ ರೂಪಿಸಲಾಗಿದೆ. ರೈತರಾಗಾಗಿ ಕಿಸಾನ್ ಕ್ರೆಡಿಟ್ ವ್ಯವಸ್ಥೆ ಜಾರಿ ಮಾಡಲಾಗಿದೆ. ಶಿಕ್ಷಣ, ಉದ್ಯೋಗ ಹಾಗೂ ಕೌಶಲ್ಯಾಭಿವೃದ್ದಿಗೆ 1.42 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

Latest Videos

Budget 2024 LIVE: ನೈಸರ್ಗಿಕ ಕೃಷಿಗೆ ಒತ್ತು, ಆಂಧ್ರ, ಬಿಹಾರಕ್ಕೆ ಬಂಪರ್

ಉದ್ಯೋಗ ಸೃಷ್ಟಿಗಾಗಿ ಮೂರು ಕೌಶಲ್ಯ ಯೋಜನೆ ಜಾರಿ ಮಾಡಲಾಗಿದೆ. ನಗರ ಅಭಿವೃದ್ಧಿ, ಇಂಧನ ಸೌಕರ್ಯ ಸೇರಿದಂತೆ ಮೂಲಭೂತ ಸೌಕರ್ಯಗಳಿಗೂ ಪ್ರತ್ಯೇಕ ಗಮನ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.  

ಅಮೃತಸರ- ಕೊಲ್ಕತ್ತಾ ಕೈಗಾರಿಕಾ ಕಾರಿಡಾರ್ ಸೇರಿದಂತೆ ಹಲವು ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಗಳನ್ನು ಘೋಷಿಸಲಾಗಿದೆ. ಅಮೃತಸರ-ಗಯಾ ಎಕಾನಮಿಕ್ ಕಾರಿಡಾರ್ ಅಭಿವೃದ್ಧಿ ಯೋಜನೆಗೆ ಮಾಡಲಾಗುವುದು ಎಂದು ಸೀತರಾಮನ್ ಹೇಳಿದ್ದಾರೆ. ಇದೇ ವೇಳೆ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ನೀಡಿದ ಬಿಹಾರದ ನಿತೀಶ್ ಕುಮಾರ್ ಹಾಗೂ ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡುಗೆ ಪ್ರತಿಯಾಗಿ ಬಂಪರ್ ಕೊಡುಗೆ ನೀಡಲಾಗಿದೆ. ಕೋಟಿ ಕೋಟಿ ರೂಪಾಯಿ ಅನುದಾನವನ್ನು ಬಿಹಾರ ಹಾಗೂ ಆಂಧ್ರ ಪ್ರದೇಶಕ್ಕೆ ಘೋಷಿಸಲಾಗಿದೆ.

ಮೂಲಭೂತ ಸೌಕರ್ಯಗಳ ಪೈಕಿ ಎಕ್ಸ್‌ಪ್ರೆಸ್ ವೇಗೆ ಹೆಚ್ಚಿನ ಒತ್ತು ನೀಡಲಾಗಿದೆ. ಉತ್ಪಾದನಾ ವಲಯದಲ್ಲಿ ಕ್ರೆಡಿಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಹಳ್ಳಿಗಳ ಅಭಿವೃದ್ಧಿಗೆ ವಿಶೇಷ ಯೋಜನೆ ಘೋಷಿಸಲಾಗಿದೆ. ಗ್ರಾಮೀಣ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.  ಇತ್ತ ಮುದ್ರಾ ಸಾಲವನ್ನು 10 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.   

ಮೋದಿ 3.0 ಸರ್ಕಾರದ ಮೊದಲ ಬಜೆಟ್: ತೆರಿಗೆದಾರರಿಗೆ ಸಿಗುತ್ತಾ ಗುಡ್‌ನ್ಯೂಸ್..? ಯಾವುದೆಲ್ಲಾ ಏರಿಕೆ,ಇಳಿಕೆ..?

click me!